ಮತದಾರ ಪಟ್ಟಿ ಅಕ್ರಮ : ಕೇಂದ್ರ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು 

khushihost
ಮತದಾರ ಪಟ್ಟಿ ಅಕ್ರಮ : ಕೇಂದ್ರ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು 

ಹೊಸದಿಲ್ಲಿ: ಮತದಾರರ ಪಟ್ಟಿ ಪರಿಷ್ಕರಣೆ ಅಕ್ರಮ ಸಂಬಂಧ ಚುನಾವಣಾ ಕಾಂಗ್ರೆಸ್ ಪಕ್ಷದಿಂದ ಅಕ್ರಮ ಸಂಬಂಧ ತನಿಖೆ ನಡೆಸುವಂತೆ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ಕರ್ನಾಟ ಕಾಂಗ್ರೆಸ್ ಉಸ್ತುವಾರಿ ರಣದೀಪ ಸಿಂಗ್ ಸುರ್ಜೇವಾಲ ಅವರ ನೇತೃತ್ವದಲ್ಲಿ ಕೇಂದ್ರ ಚುನಾವಣಾ ಆಯೋಗದ ಕಚೇರಿಗೆ ಒಂದೇ ಕಾರಿನಲ್ಲಿ ಕಾಂಗ್ರೆಸ್ ನಾಯಕರು ತೆರಳಿ ದೂರು ನೀಡಿದ್ದಾರೆ.

ರಣದೀಪ್ ಸುರ್ಜೇವಾಲರೊಂದಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ, ವಕ್ತಾರ ಪ್ರಿಯಾಂಕ ಖರ್ಗೆ, ಕರ್ನಾಟಕ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷ ಎಂ.ಬಿ ಪಾಟೀಲ ತೆರಳಿ ದೂರು ಸಲ್ಲಿಸಿದ್ದಾರೆ.

ಕಾಂಗ್ರೆಸ್ ಪಕ್ಷ ಸಲ್ಲಿಸಿರುವ ದೂರಿನಲ್ಲಿ ಬೆಂಗಳೂರಿನ ಮತದಾರರ ಪಟ್ಟಿಯ ಪರಿಷ್ಕರಣೆ ಅಕ್ರಮದಲ್ಲಿ ರಾಜ್ಯ ಸರ್ಕಾರವೇ ನೇರವಾಗಿ ಭಾಗಿಯಾಗಿದೆ. ಅಕ್ರಮ ಎಸಗಿದ ಸಚಿವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ತಿಳಿಸಲಾಗಿದೆ.

Share This Article