ಅಕ್ಟೋಬರ್ ನಲ್ಲಿ 7ನೇ ವೇತನ ಆಯೋಗ ರಚನೆ

khushihost
ಅಕ್ಟೋಬರ್ ನಲ್ಲಿ 7ನೇ ವೇತನ ಆಯೋಗ ರಚನೆ

ಬೆಂಗಳೂರು :  ಅಕ್ಟೋಬರ್ ನಲ್ಲಿ ನೂತನ ಆಯೋಗ ರಚನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.

ವಿಧಾನಸೌಧದದ ಬ್ಯಾಂಕ್ವೆಟ್ ಹಾಲ್ ನಲ್ಲಿ ಇಂದು ಆಯೋಜಿಸಿದ್ದ ರಾಜ್ಯ ಸರ್ಕಾರಿ ನೌಕರರ ದಿನ ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸರ್ಕಾರಿ ನೌಕರರಿಗೆ ಕೊಟ್ಟ ಮಾತಿನಂತೆ ಅಕ್ಟೋಬರ್ ನಲ್ಲಿ ನೂತನ ವೇತನ ಆಯೋಗ ರಚನೆ ಮಾಡಲಾಗುವುದು. ವೇತನ ಪರಿಷ್ಕರಣೆಗೆ ಸಂಬಂಧಿಸಿದಂತೆ ಶಿಫಾರಸು ಹಾಗೂ ವರದಿ ಸಲ್ಲಿಸಲು ಈ ಆಯೋಗ ರಚಿಸಲಿದ್ದು, ನೌಕರರ ಉಳಿದ ಬೇಡಿಕೆಗಳನ್ನು ಈಡೇರಿಸಲು ಪ್ರಯತ್ನಿಸಲಾಗುವುದು ಎಂದು ಹೇಳಿದ್ದಾರೆ.

ಆರ್ಥಿಕ ಬಲದ ಆಧಾರದ ಮೇಲೆ ಅಭಿವೃದ್ಧಿ, ಜನರ ಆಶೋತ್ತರಗಳಿಗೆ ಸ್ಪಂದನೆ ಜೊತೆಗೆ ನೌಕರರ ಬೇಡಿಕೆಗಳನ್ನು ಈಡೇರಿಸಲು ರಾಜ್ಯ ಸರ್ಕಾರ ಶಕ್ತವಾಗಿದೆ ಎಂದು ಹೇಳಿದ್ದಾರೆ.

Share This Article