ಬೆಳಗಾವಿ ಅಧಿವೇಶನಕ್ಕೆ ದಿನಾಂಕ ನಿಗದಿ

khushihost
ಬೆಳಗಾವಿ ಅಧಿವೇಶನಕ್ಕೆ ದಿನಾಂಕ ನಿಗದಿ

ಬೆಂಗಳೂರು : ಡಿಸೆಂಬರ 19 ರಿಂದ 29ವರೆಗೆ ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಸಲು ಸಂಪುಟ ಸಭೆ ನಿರ್ಧರಿಸಿದೆ.

ವಿಧಾನಸೌಧದಲ್ಲಿ ನಡೆದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ತೀರ್ಮಾನಿಸಿದೆ.

ಸಭೆಯಲ್ಲಿ ಹಲವು ಮಹತ್ವದ ವಿಚಾರಗಳ ಬಗ್ಗೆ ಚರ್ಚೆಯಾಗಿದ್ದು, ಚಳಿಗಾಲ ಅಧಿವೇಶನದ ಕುರಿತು ಹಾಗೂ ಸಿವಿಲ್ ಸೇವೆಗಳ ನಿಯಮ ಸೇರಿದಂತೆ ಹಲವು ವಿಚಾರಗಳ ಕುರಿತು ಚರ್ಚೆ ನಡೆದಿದೆ. ಒಟ್ಟು 10 ದಿನಗಳ ಕಾಲ ಅಧಿವೇಶನ ನಡೆಸಲು ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.

 

Share This Article