ಹಿಜಾಬ್ ವಿಷಯದಲ್ಲಿ ನ್ಯಾಯಮೂರ್ತಿಗಳ ವಿಭಿನ್ನ ತೀರ್ಪು : ಸಿಜೆಐ ಪೀಠಕ್ಕೆ ವರ್ಗಾವಣೆ

khushihost
ಹಿಜಾಬ್ ವಿಷಯದಲ್ಲಿ ನ್ಯಾಯಮೂರ್ತಿಗಳ ವಿಭಿನ್ನ ತೀರ್ಪು : ಸಿಜೆಐ ಪೀಠಕ್ಕೆ ವರ್ಗಾವಣೆ

ಹೊಸದಿಲ್ಲಿ: ಶಾಲಾ – ಕಾಲೇಜುಗಳಲ್ಲಿ ಹಿಜಾಬ್ ಕುರಿತು ಕರ್ನಾಟಕ ಹೈಕೋರ್ಟ ತೀರ್ಪು ಪ್ರಶ್ನಿಸಿ ಸಲ್ಲಿಕೆಯಾಗಿರುವ ಮೇಲ್ಮನವಿಗಳ ಮೇಲೆ ಸುಪ್ರೀಮ ಕೋರ್ಟ​ನಲ್ಲಿ ವಿಭಿನ್ನ ತೀರ್ಪು ಪ್ರಕಟವಾಯಿತು.

ಓರ್ವ ನ್ಯಾಯಮೂರ್ತಿ ಮುಸ್ಲಿಂ ವಿದ್ಯಾರ್ಥಿನಿಯರ ಮೇಲ್ಮನವಿಯನ್ನು ವಜಾಗೊಳಿಸಿದರೆ, ಇನ್ನೋರ್ವರು ಹೈಕೋರ್ಟ​ ಆದೇಶವನ್ನು ರದ್ದು ಮಾಡಿದರು.

ಈ ಎರಡು ವಿಭಿನ್ನ ತೀರ್ಪಿನಿಂದ ಜನರಲ್ಲಿನ ಗೊಂದಲಕ್ಕೆ ಮತ್ತಷ್ಟು ನೀರೆರೆದಂತಾಗಿದೆ. ಇದೀಗ ಹಿಜಾಬ್​ ಪ್ರಕರಣವನ್ನು ಸಿಜೆಐ ಪೀಠಕ್ಕೆ ವರ್ಗಾಯಿಸಲಾಗಿದೆ.

ನ್ಯಾಯಪೀಠದ ಸದಸ್ಯ ನ್ಯಾಯಮೂರ್ತಿ ಹೇಮಂತ ಗುಪ್ತಾ ಅವರು ಮುಸ್ಲಿಂ ವಿದ್ಯಾರ್ಥಿನಿಯರ ಮೇಲ್ಮನವಿಯನ್ನು ವಜಾಗೊಳಿಸಿದರೆ, ಮತ್ತೋರ್ವ ನ್ಯಾಯಮೂರ್ತಿ ಸುಧಾಂಶು ಧುಲಿಯಾ ಅವರು ಹಿಬಾಜ್​ ನಿಷೇಧ​ ಮಾಡಿ ಹೊರಡಿಸಿದ್ದ ಆದೇಶವನ್ನು ರದ್ದು ಮಾಡಿದರು. ನ್ಯಾಯಮೂರ್ತಿಗಳಲ್ಲೇ ವಿಭಿನ್ನ ತೀರ್ಪು ಪ್ರಕಟವಾದ ಹಿನ್ನೆಲೆಯಲ್ಲಿ ಈ ಪ್ರಕರಣವನ್ನು ಸಿಜೆಐ ಪೀಠಕ್ಕೆ ವರ್ಗಾಯಿಸಲಾಗಿದೆ.

ನ್ಯಾಯಮೂರ್ತಿಗಳಿಂದ ವಿಭಿನ್ನ ತೀರ್ಪು ಬಂದಿರುವ ಹಿನ್ನೆಲೆಯಲ್ಲಿ ಸದ್ಯಕ್ಕೆ ಶಾಲಾ-ಕಾಲೇಜುಗಳಲ್ಲಿ ಹಿಜಾಬ್​ಗೆ ಅವಕಾಶವಿಲ್ಲ. ಮುಂದಿನ ತೀರ್ಪು ಬರುವವರೆಗೂ ಹೈಕೋರ್ಟ​ ತೀರ್ಪನ್ನೇ ಯಥಾಸ್ಥಿತಿ ಕಾಯ್ದುಕೊಳ್ಳಲಾಗುತ್ತದೆ.

ಸಿಜೆಐ ಪೀಠಕ್ಕೆ ಪ್ರಕರಣ ವರ್ಗಾವಣೆ ಆಗಿದ್ದು, ಮುಂದೆ ಸಿಜೆಐ ಅವರು ವಿಸ್ತ್ರತ ಪೀಠ ರಚನೆ ಮಾಡಲಿದ್ದು, ಅಲ್ಲಿ ಪ್ರಕರಣ ಇತ್ಯರ್ಥ ಆಗುವ ವರೆಗೂ ಹೈಕೋರ್ಟ​ ತೀರ್ಪನ್ನೇ ಯಥಾಸ್ಥಿತಿ ಕಾಯ್ದುಕೊಳ್ಳಲಾಗುತ್ತದೆ.

Share This Article