ಡಬಲ್‌ ಎಂಜಿನ್‌ ಸರ್ಕಾರದಿಂದ ಡಬಲ್ ಭ್ರಷ್ಟಾಚಾರ

khushihost
ಡಬಲ್‌ ಎಂಜಿನ್‌ ಸರ್ಕಾರದಿಂದ ಡಬಲ್ ಭ್ರಷ್ಟಾಚಾರ

ದಾವಣಗೆರೆ:‌ ಡಬಲ್ಎಂಜಿನ್ಸರ್ಕಾರ ತರುತ್ತೇವೆ ಎಂದು ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದರು. ಜನ ಅದನ್ನು ನಂಬಿ ಅಧಿಕಾರವನ್ನೂ ನೀಡಿದರು. ಡಬಲ್ ಎಂಜಿನ್ಸರ್ಕಾರ ಬಂದು ಇಲ್ಲಿ ಭ್ರಷ್ಟಾಚಾರವೇ ಡಬಲ್ಆಯಿತು. 20 ಪರ್ಸೆಂಟ್ ಇದ್ದಿದ್ದು 40 ಪರ್ಸೆಂಟ್ಆಯಿತು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಶನಿವಾರ ದಾವಣಗೆರೆಯಲ್ಲಿ ಆಮ್ ಆದ್ಮಿ ಪಕ್ಷದ ಸಮಾವೇಶ ಉದ್ಘಾಟಿಸಿ ಮಾತನಾಡಿದ ಕೇಜ್ರಿವಾಲ್, ಎಎಪಿ ಅಧಿಕಾರಕ್ಕೆ ಬಂದರೆ ರಾಜ್ಯದ ಜನತೆಗೆ ಉಚಿತ ವಿದ್ಯುತ್, ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ಹಾಗೂ ಉತ್ತಮ ಆರೋಗ್ಯ ಸೇವೆ ನೀಡುವುದಾಗಿ ಭರವಸೆ ನೀಡಿದರು.

ಕರ್ನಾಟಕದಲ್ಲಿರುವ 40 ಪರ್ಸೆಂಟ್ ಕಮಿಷನ್ ಸರ್ಕಾರವನ್ನು ಕಿತ್ತೊಗೆದು ಐದು ವರ್ಷಗಳ ಕಾಲ ಭ್ರಷ್ಟಾಚಾರ ಮುಕ್ತ ಸರ್ಕಾರ ನೀಡಲು ಆಮ್ ಆದ್ಮಿ ಪಕ್ಷಕ್ಕೆ ಒಂದು ಅವಕಾಶ ನೀಡುವಂತೆ ಅರವಿಂದ ಕೇಜ್ರಿವಾಲ್ ಅವರು ಶನಿವಾರ ರಾಜ್ಯದ ಜನತೆಗೆ ಮನವಿ ಮಾಡಿದ್ದಾರೆ. ದೆಹಲಿ ಮತ್ತು ಪಂಜಾಬ್ ನಲ್ಲಿ ನಾವೇನು ಮಾಡಿದ್ದೇವೆ ಎಂಬದು ಜನರಿಗೆ ಗೊತ್ತಿದೆ. ಪಂಜಾಬ್ ಮತ್ತು ದೆಹಲಿಯಲ್ಲಿ ಪ್ರಾಮಾಣಿಕ ಸರ್ಕಾರ ಕೊಟ್ಟಂತೆ ಇಲ್ಲಿಯೂ ಭ್ರಷ್ಟಾಚಾರ ಮುಕ್ತ ಸರ್ಕಾರ ನೀಡುತ್ತೇವೆ ಎಂದು ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ.

ದೆಹಲಿಯಲ್ಲಿ ಸರ್ಕಾರಿ ಶಾಲೆಗಳನ್ನು ಅತ್ಯುತ್ತಮವಾಗಿ ರೂಪಿಸಿದ್ದೇವೆ. ಮಕ್ಕಳಿಗೆ ಉಚಿತ ವಿದ್ಯಾಭ್ಯಾಸ, ಉಚಿತ ಸಮವಸ್ತರ ನೀಡಿದ್ದೇವೆ. ದೆಹಲಿ ಜನರಿಗೆ ಉತ್ತಮ ಆಸ್ಪತ್ರೆ ಸೌಲಭ್ಯ ಉಚಿತವಾಗಿ ಒದಗಿಸಿದ್ದೇವೆ. ಮಹಿಳೆಯರಿಗೆ ಬಸ್ನಲ್ಲಿ ಉಚಿತ ಪ್ರಯಾಣ, 200 ಯುನಿಟ್ವಿದ್ಯುತ್ಉಚಿತ ಹೀಗೆ ಅನೇಕ ಕಾರ್ಯಕ್ರಮಗಳನ್ನು ಮಾಡಿದ್ದೇವೆ ಎಂದು ಕೇಜ್ರಿವಾಲ್ ತಿಳಿಸಿದರು.

Share This Article