ದಸರಾ ವಸ್ತು ಪ್ರದರ್ಶನ ಆವರಣದಲ್ಲಿ ಅಗ್ನಿ ಅವಘಡ; ಹೊತ್ತಿ ಉರಿದ ಪ್ರಾಧಿಕಾರ

khushihost
ದಸರಾ ವಸ್ತು ಪ್ರದರ್ಶನ ಆವರಣದಲ್ಲಿ ಅಗ್ನಿ ಅವಘಡ; ಹೊತ್ತಿ ಉರಿದ ಪ್ರಾಧಿಕಾರ

ಮೈಸೂರು: ಅರಮನೆ ನಗರಿ ಮೈಸೂರಿನ ದಸರಾ ವಸ್ತು ಪ್ರದರ್ಶನ ಆವರಣದಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಬೆಂಕಿ ಕೆನ್ನಾಲಿಗೆಗೆ ವಸ್ತು ಪ್ರದರ್ಶನದ ಆವರಣದಲ್ಲಿದ್ದ ಪ್ರಾಧಿಕಾರದ ಕಚೇರಿಯೇ ಹೊತ್ತಿ ಉರಿದಿದೆ.

ಪ್ರಾಧಿಕಾರದ ಕಚೇರಿಯಲ್ಲಿದ್ದ ಪೀಠೋಪಕರಣಗಳು ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿವೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿಗಳು ಆಗಮಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.

ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅವಘಡ ಸಂಭವಿಸಿದ್ದು, ಇಡೀ ಪ್ರಾಧಿಕಾರವೇ ಧಗಧಗನೆ ಹೊತ್ತಿ ಉರಿದಿದೆ.

Share This Article