FDA ಹುದ್ದೆ ಕೊಡಿಸಲು ಅವ್ಯವಹಾರ : ಪಿಎಸ್‌ಐ ಅಶ್ವಿನಿ ಅಮಾನತು

1 week ago 29

ಮೈಸೂರು: ಪ್ರಥಮ ದರ್ಜೆ ಸಹಾಯಕರ ಹುದ್ದೆ ಕೊಡಿಸಲು ಅವ್ಯವಹಾರ ಆರೋಪದ ಹಿನ್ನೆಲೆಯಲ್ಲಿ ನರಸಿಂಹರಾಜ ಸಂಚಾರ ಪೊಲೀಸ್‌ ಠಾಣೆಯ ಪಿಎಸ್‌ಐ ಅಶ್ವಿನಿ ಅನಂತಪುರ ಅವರನ್ನು ಅಮಾನತುಗೊಳಿಸಿ ನಗರ ಪೊಲೀಸ್‌ ಆಯುಕ್ತರು ಆದೇಶ ಹೊರಡಿಸಿದ್ದಾರೆ.

ಕೆಪಿಎಸ್‌ಸಿ ಪ್ರಥಮದರ್ಜೆ ಸಹಾಯಕರ ನೇಮಕಾತಿ ಪ್ರಕ್ರಿಯೆಯಲ್ಲಿ ಬಸವರಾಜು ಎಂಬುವರಿಗೆ ಹುದ್ದೆ ಕೊಡಿಸಲು ಬಾಗಲಕೋಟೆ ಮೂಲದ ಸಂಗಮೇಶ ಝಳಕಿ ಎಂಬುವರ ಜೊತೆ ಆರೋಪಿ ಪಿಎಸ್‌ಐ ಮಾತನಾಡಿದ್ದೆನ್ನಲಾದ ಮೊಬೈಲ್‌ ಹಾಗೂ ವಾಟ್ಸಾಪ್ ಆಡಿಯೊ ಸಂಭಾಷಣೆಗಳು ಜಾಲತಾಣಗಳಲ್ಲಿ ವೈರಲ್‌ ಆಗಿದ್ದವು.

ಅಲ್ಲದೆ, ಹಣ ಅಕ್ರಮ ವರ್ಗಾವಣೆಯ ಬ್ಯಾಂಕ್‌ ಸ್ಟೇಟ್‌ಮೆಂಟ್‌ ಕೂಡ ಮಾಧ್ಯಮಗಳಲ್ಲಿ ಬಿತ್ತರಗೊಂಡಿತ್ತು.

ಈ ಬಗ್ಗೆ ನಗರ ಅಪರಾಧ ವಿಭಾಗದ ಎಸಿಪಿ ಪ್ರಾಥಮಿಕ ತನಿಖೆ ನಡೆಸಿದ್ದು, ಮೇಲ್ನೋಟಕ್ಕೆ ನೈಜವೆಂದು ತಿಳಿದು ಬಂದ ಹಿನ್ನೆಲೆಯಲ್ಲಿ ಪಿಎಸ್‌ಐ ಅಶ್ವಿನಿ ಅವರನ್ನು ಅಮಾನತು ಮಾಡಲಾಗಿದೆ.

Read Entire Article