ಕೆಂಪೇಗೌಡರ ಪ್ರತಿಮೆ ಅನಾವರಣಕ್ಕೆ ಆಹ್ವಾನಿಸದ್ದಕ್ಕೆ ಪರೋಕ್ಷವಾಗಿ ಬೇಸರ ವ್ಯಕ್ತಪಡಿಸಿದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ

khushihost
ಕೆಂಪೇಗೌಡರ ಪ್ರತಿಮೆ ಅನಾವರಣಕ್ಕೆ ಆಹ್ವಾನಿಸದ್ದಕ್ಕೆ ಪರೋಕ್ಷವಾಗಿ ಬೇಸರ ವ್ಯಕ್ತಪಡಿಸಿದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ

ಹಾಸನ: ಕೆಂಪೇಗೌಡರ ಪ್ರತಿಮೆ ಅನಾವರಣಕ್ಕೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರನ್ನು ಆಹ್ವಾನಿಸದ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರದ ಕ್ರಮಕ್ಕೆ ದೇವೇಗೌಡರು ಪರೋಕ್ಷ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಹಾಸನದಲ್ಲಿ ಮಾತನಾಡಿದ ಅವರು, ಈ ಬಗ್ಗೆ ನಾನು ಏನೂ ಮಾತನಾಡುವುದಿಲ್ಲ. ಯಾರ್ಯಾರು ಏನೇನು ಮಾಡಿದರು ಎಂದು ನಾನು ವಿಶ್ಲೇಷಣೆ ಮಾಡುವುದಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಇದೇ ವೇಳೆ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಮುಂದಿನ ವಾರದಿಂದ ಹಾಸನ ಪ್ರವಾಸ ಮಾಡುತ್ತೇನೆ. ಹಾಸನದ ಪ್ರತಿ ಕ್ಷೇತ್ರದಲ್ಲಿಯೂ ಒಂದೊಂದು ದಿನ ಪ್ರವಾಸ ಮಾಡುತ್ತೇನೆ. ಹಾಸನ ಪ್ರವಾಸದ ಬಳಿಕ ರಾಜ್ಯ ಪ್ರವಾಸ ಕೈಗೊಂಡು ಪಕ್ಷ ಸಂಘಟನೆ ಮಾಡುತ್ತೇನೆ ಎಂದು ಹೇಳಿದರು.

Share This Article