ಹಳ್ಳದ ನೀರಿನ ರಭಸಕ್ಕೆ ಕೊಚ್ಚಿ ಹೋದ ನಾಲ್ವರು ಮಹಿಳೆಯರು 

khushihost
ಹಳ್ಳದ ನೀರಿನ ರಭಸಕ್ಕೆ ಕೊಚ್ಚಿ ಹೋದ ನಾಲ್ವರು ಮಹಿಳೆಯರು 

ಕೊಪ್ಪಳ: ಕೆಲಸದಿಂದ ಗ್ರಾಮಕ್ಕೆ ಮರಳುವಾಗ ಹಳ್ಳದ ನೀರಿನ ರಭಸಕ್ಕೆ ನಾಲ್ವರು ಮಹಿಳೆಯರು ಕೊಚ್ಚಿಹೋದ ದುರ್ಘಟನೆ ಯಲಬುರ್ಗಾ ತಾಲೂಕಿನ ಸಂಕನೂರು ಗ್ರಾಮದಲ್ಲಿ ನಡೆದಿದೆ.

ಗಿರಿಜಾ ಮಾಲಿಪಾಟೀಲ(32), ಭುವನೇಶ್ವರಿ ಪೊಲೀಸ್ ಪಾಟೀಲ(40), ಪವಿತ್ರಾ ಪೊಲೀಸ್ ಪಾಟೀಲ(45) ಮತ್ತು ವೀಣಾ ಮಾಲಿಪಾಟೀಲ್(19) ಹಳ್ಳದಲ್ಲಿ ಕೊಚ್ಚಿಕೊಂಡು ಹೋದ ದುರ್ದೈವಿಗಳು.

ಕೆಲಸ ಮುಗಿಸಿಕೊಂಡು ಗ್ರಾಮಕ್ಕೆ ವಾಪಸಾಗುವಾಗ ಈ ಘಟನೆ ನಡೆದಿದೆ. ಮಹಿಳೆಯರು ನೀರಿನ ರಭಸ ಲೆಕ್ಕಿಸದೇ ಹಳ್ಳಕ್ಕೆ ಇಳಿದಿದ್ದಾರೆ. ಹಳ್ಳದಲ್ಲಿ ಇಳಿಯುತ್ತಲೇ ಪವಿತ್ರಾ ಮತ್ತು ವೀಣಾ ಎಂಬಿಬ್ಬರು ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ. ಬಳಿಕ ಗಿರಿಜಾ ಮತ್ತು ಭುವನೇಶ್ವರಿ ಅವರೂ ಕೂಡ ಕೊಚ್ಚಿಕೊಂಡು ಹೋಗಿದ್ದಾರೆ.

ಆದರೆ ಕೆಲಹೊತ್ತು ಗಿರಿಜಾ ಮತ್ತು ಭುವನೇಶ್ವರಿ ಹಳ್ಳದಲ್ಲಿನ ಗಿಡ ಹಿಡಿದುಕೊಂಡಿದ್ದರು. ಗ್ರಾಮಸ್ಥರು ರಕ್ಷಿಸಲು ಮುಂದಾಗುವ ವೇಳೆಗೆ ಕೊಚ್ಚಿ ಹೋಗಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿದ್ದಾರೆ. ಯಲಬುರ್ಗಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share This Article