ಹಿಂದೂ ಕಾರ್ಯಕರ್ತರು, ಕನ್ನಡ ಹೋರಾಟಗಾರರ ಮೇಲಿನ ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆದ ಸರ್ಕಾರ

khushihost
ಹಿಂದೂ ಕಾರ್ಯಕರ್ತರು, ಕನ್ನಡ ಹೋರಾಟಗಾರರ ಮೇಲಿನ ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆದ ಸರ್ಕಾರ

ಬೆಂಗಳೂರು: ಹಿಂದೂ ಕಾರ್ಯಕರ್ತರು ಹಾಗು ಕನ್ನಡ ಹೋರಾಟಗಾರರ ಮೇಲೆ ದಾಖಲಾದ ಒಟ್ಟು 35 ಕ್ರಿಮಿನಲ್ ಮೊಕದ್ದಮೆಗಳನ್ನು ಹಿಂಪಡೆಯಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ರೈತ ಮುಖಂಡರು ಸೇರಿದಂತೆ ಇತರರ ವಿರುದ್ಧ ದಾಖಲಾದ 35 ಕ್ರಿಮಿನಲ್ ಮೊಕದ್ದಮೆಗಳನ್ನು ಹಿಂಪಡೆದುಕೊಳ್ಳಲು ತೀರ್ಮಾನಿಸಲಾಗಿದೆ.

ಸಚಿವ ಸಂಪುಟ ಉಪಸಮಿತಿ ಆಧರಿಸಿ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.

Share This Article