ಮಹಾರಾಷ್ಟ್ರದಲ್ಲಿ ಗುಂಪು ಘರ್ಷಣೆ; ವಾಹನಗಳಿಗೆ ಬೆಂಕಿ

khushihost
ಮಹಾರಾಷ್ಟ್ರದಲ್ಲಿ ಗುಂಪು ಘರ್ಷಣೆ; ವಾಹನಗಳಿಗೆ ಬೆಂಕಿ

ಮುಂಬೈ: ಮಹಾರಾಷ್ಟ್ರದ ಔರಂಗಾಬಾದನಲ್ಲಿ ಯುವಕರ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದ್ದು, ಕಿಡಿಗೇಡಿಗಳು ಪೊಲೀಸ್ ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ.

ಬುಧವಾರ ಸಂಜೆ ಎರಡು ಗುಂಪುಗಳ ನಡುವೆ ನಡೆದ ಘರ್ಷಣೆ ಕ್ರಮೇಣ ಹಿಂಸಾತ್ಮಕ ಸ್ವರೂಪ ಪಡೆದುಕೊಂಡಿದ್ದು, ಉದ್ರಿಕ್ತರು ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಾರೆ. ಅಲ್ಲದೇ ಸ್ಥಳದಲ್ಲಿದ್ದ ಹಲವಾರು ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ಘಟನಾ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ ಎನ್ನಲಾಗಿದೆ.

ಘರ್ಷಣೆಯಲ್ಲಿ 500 ರಿಂದ 600 ಮಂದಿ ಯುವಕರು ಭಾಗಿಯಾಗಿದ್ದು, ಇನ್ನೂ ಗುರುತು ಪತ್ತೆಯಾಗಿಲ್ಲ. ಪ್ರಸಿದ್ಧ ರಾಮ ಮಂದಿರವಿರುವ ಕಿರಾದಪುರದಲ್ಲಿ ಈ ಘಟನೆ ನಡೆದಿದೆ. ಔರಂಗಾಬಾದ್ನಲ್ಲಿ ಬಿಗಿ ಪೊಲೀಸ್ ಭದ್ರತೆ ಕಲ್ಪಿಸಲಾಗಿದ್ದು ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಪೊಲೀಸ್ ಕಮಿಷನರ್ ನಿಖಿಲ್ ಗುಪ್ತಾ ಹೇಳಿದ್ದಾರೆ.

ಕೃತ್ಯದಲ್ಲಿ ಭಾಗಿಯಾಗಿದ್ದ ಯುವಕರ ಪತ್ತೆ ಮಾಡಲಾಗುತ್ತಿದೆ. ಸುಮಾರು ಒಂದು ಗಂಟೆ ಕಾಲ ನಡೆದ ಘರ್ಷಣೆಯಲ್ಲಿ ಆರರಿಂದ ಏಳು ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ಹಿಂಸಾಚಾರಕ್ಕೆ ಪ್ರಚೋದನೆ ನೀಡಿದವರನ್ನು ಬಂಧಿಸಲು 10 ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ ಎಂದು ಸುದ್ದಿಸಂಸ್ಥೆಯೊಂದು ವರದಿ ಮಾಡಿದೆ.

ಸ್ಥಳೀಯ ಸಂಸದ ಇಮ್ತಿಯಾಜ್ ಜಲೀಲ ಹಾಗು ರಾಜ್ಯ ಬಿಜೆಪಿ ಸಚಿವ ಅತುಲ್ ಸೇವ್ ಸೇರಿದಂತೆ ಹಲವರು ಶಾಂತಿ ಕಾಪಾಡುವಂತೆ ಮನವಿ ಮಾಡಿದ್ದಾರೆ.

Share This Article