ಬಾಬಾ ಬುಡನ್ ಗಿರಿ ದರ್ಗಾದ ಪೂಜಾ ವಿಧಾನ : ಯಥಾಸ್ಥಿತಿ ಕಾಪಾಡಲು ಹೈಕೋರ್ಟ ಆದೇಶ 

khushihost
ಬಾಬಾ ಬುಡನ್ ಗಿರಿ ದರ್ಗಾದ ಪೂಜಾ ವಿಧಾನ : ಯಥಾಸ್ಥಿತಿ ಕಾಪಾಡಲು ಹೈಕೋರ್ಟ ಆದೇಶ 

ಬೆಂಗಳೂರು : ಬಾಬಾ ಬುಡನ್ ಗಿರಿ ದರ್ಗಾದ ಪೂಜಾ ವಿಧಾನದಲ್ಲಿ ಯಾವುದೇ ಬದಲಾವಣೆ ಮಾಡಬಾರದು. ಯಥಾಸ್ಥಿತಿ ಕಾಪಾಡಿಕೊಳ್ಳಬೇಕು ಎಂದು ಹೈಕೋರ್ಟ​ ಆದೇಶ ನೀಡಿದೆ.

ಎರಡೂ ಧರ್ಮದ ಸಂಪ್ರದಾಯಗಳ ಪ್ರಕಾರ ಪೂಜಾವಿಧಿ ನಡೆಸಲು ಮುಜಾವರ ಹಾಗೂ ಅರ್ಚಕರಿಗೆ ಅವಕಾಶ ನೀಡಲಾಗಿದೆ ಎಂದು ರಾಜ್ಯ ಸಂಪುಟ ನಿರ್ಧರಿಸಿತ್ತು.

ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸೈಯದ ಗೌಸ್ ಮೊಹಿಯುದ್ದೀನ ಶಾಖಾದ್ರಿ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾಯಾಲಯವು ಈ ಆದೇಶ ಹೊರಡಿಸಿದೆ.

ಧಾರ್ಮಿಕ ವಿಧಿಗಳನ್ನು ನೆರವೇರಿಸಲು ಮುಜಾವರ ಜೊತೆ ಆಗಮಶಾಸ್ತ್ರ ಗೊತ್ತಿರುವ ಹಿಂದೂ ಅರ್ಚಕರನ್ನು ನೇಮಿಸಲು ಸರ್ಕಾರ ತೀರ್ಮಾನಿಸಿತ್ತು. ಈ ಸಂಬಂಧ ಕಳೆದ ಅಗಸ್ಟ 19 ರಂದು ಸುತ್ತೋಲೆ ಸಹ ಹೊರಡಿಸಿತ್ತು.

ಹಿಂದೂ ಮತ್ತು ಮುಸ್ಲಿಂ ಧರ್ಮಗಳ ಪ್ರತಿನಿಧಿಗಳು ಇರುವ ವ್ಯವಸ್ಥಾಪನಾ ಸಮಿತಿ ರಚಿಸಬೇಕು. ಅರ್ಚಕ ಮತ್ತು ಮುಜಾವರ ಅವರನ್ನು ಈ ವ್ಯವಸ್ಥಾಪನಾ ಸಮಿತಿಯಿಂದಲೇ ನೇಮಿಸಬೇಕು ಎಂದು ಸೂಚನೆ ಸರ್ಕಾರ ನೀಡಿತ್ತು.

Share This Article