ಹಿಜಾಬ್ ವಿಚಾರಣೆ ಸೋಮವಾರಕ್ಕೆ ಮುಂದೂಡಿಕೆ 

khushihost
ಹಿಜಾಬ್ ವಿಚಾರಣೆ ಸೋಮವಾರಕ್ಕೆ  ಮುಂದೂಡಿಕೆ 

ನವದೆಹಲಿ: ರಾಜ್ಯದ ಶಾಲಾ ಕಾಲೇಜುಗಳಲ್ಲಿ ಹಿಜಾಬ್​ ಧರಿಸುವುದನ್ನು ನಿಷೇಧಿಸಿ ಹೈಕೋರ್ಟ ನೀಡಿದ​ ಆದೇಶದ ವಿರುದ್ಧ ಸಲ್ಲಿಸಲಾದ ಮೇಲ್ಮನವಿ ಅರ್ಜಿಗಳ ವಿಚಾರಣೆ ಸುಪ್ರೀಮ ಕೋರ್ಟ​ನಲ್ಲಿಂದು ನಡೆಯಿತು. ವಾದ- ಪ್ರತಿವಾದಿಗಳ ಬಳಿಕ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಲಾಗಿದೆ.

ಹಿರಿಯ ವಕೀಲ ದೇವದತ್​ ಕಾಮತ​ ಅವರು, ಬಟ್ಟೆಯ ವಿಚಾರದಲ್ಲಿ ಸರ್ಕಾರ ಮಕ್ಕಳ ಶಿಕ್ಷಣವನ್ನು ಹಾಳು ಮಾಡುತ್ತಿದೆ ಎಂದು ದೂರಿದರು. ಈ ವೇಳೆ ಪೀಠ, ಮಕ್ಕಳು ಶಾಲೆಯೊಳಗೆ ಮಿಡಿ, ಸ್ಕರ್ಟ್​ ಧರಿಸಿ ಬರಬಹುದೇ ಎಂದು ಪ್ರಶ್ನಿಸಿದ್ದರು. ಹೀಗಾಗಿ ಶಿಕ್ಷಣಕ್ಕೂ, ಬಟ್ಟೆಗೂ ಸಂಬಂಧವಿಲ್ಲ ಎಂಬ ಅಭಿಪ್ರಾಯ ವ್ಯಕ್ತಪಡಿಸಿತ್ತು.

ನಿನ್ನೆ ನಡೆದ ಎರಡನೇ ದಿನದ ವಿಚಾರಣೆಯಲ್ಲಿ ಹಿಜಾಬ್​ ಧರಿಸುವುದು ಹಕ್ಕು ಎಂದು ವಾದ ಮಂಡಿಸಿದಾಗ ಕೋರ್ಟ​, ಧರಿಸುವ ಹಕ್ಕಿದ್ದರೆ, ಅದನ್ನು ಧರಿಸದೇ ಇರುವ ಹಕ್ಕೂ ಇದೆ ಎಂದು ನ್ಯಾಯಾಧೀಶರು ಹೇಳಿದ್ದರು. ಮೇಲ್ಮನವಿ ಅರ್ಜಿಗಳನ್ನು ಸುಪ್ರೀಮ ಕೋರ್ಟ ನ್ಯಾಯಮೂರ್ತಿಗಳಾದ ಹೇಮಂತ ಗುಪ್ತಾ ಮತ್ತು ಸುಧಾಂಶು ಧುಲಿಯಾ ಅವರಿದ್ದ ಪೀಠ ವಿಚಾರಣೆ ನಡೆಸಿತು.

 

 

Share This Article