ಶನಿವಾರ ಶಾಲೆಗಳಿಗೆ ರಜೆ ಘೋಷಣೆ; ಜಲಪಾತಗಳಿಗೆ ನಿರ್ಬಂಧ

khushihost
ಶನಿವಾರ ಶಾಲೆಗಳಿಗೆ ರಜೆ ಘೋಷಣೆ; ಜಲಪಾತಗಳಿಗೆ ನಿರ್ಬಂಧ

ಬೆಳಗಾವಿ, ಜು.21 : ಖಾನಾಪುರ ತಾಲ್ಲೂಕಿನಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಖಾನಾಪುರ ತಾಲ್ಲೂನಾದ್ಯಂತ ಇರುವ ಪ್ರಾಥಮಿಕ-ಪ್ರೌಢಶಾಲೆಗಳಿಗೆ ಶನಿವಾರ (ಜು‌.22) ಒಂದು ದಿನ ರಜೆಯನ್ನು ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರು ತಿಳಿಸಿದ್ದಾರೆ.

ಕಳೆದ ಮೂರ್ನಾಲ್ಕು ದಿನಗಳಿಂದ ಖಾನಾಪುರ ತಾಲ್ಲೂಕಿನಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದೆ. ಆದ್ದರಿಂದ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಶಾಲೆಗಳಿಗೆ ರಜೆ ಘೋಷಿಸಲಾಗಿರುತ್ತದೆ.

ಜಲಪಾತಗಳ ಭೇಟಿಗೆ ನಿರ್ಬಂಧ:

ಖಾನಾಪುರ ತಾಲ್ಲೂಕಿನ ಚಿಕಲೆ, ಪಾರವಾಡ ಹಾಗೂ ಚಿಗುಲೆ ಫಾಲ್ಸ್ ಗಳನ್ನು ಹೊರತುಪಡಿಸಿ ಖಾನಾಪುರ ತಾಲ್ಲೂಕಿನ ಇತರೆ ಎಲ್ಲ  ಜಲಪಾತಗಳಿಗೆ ಸಾರ್ವಜನಿಕರ ಭೇಟಿಯನ್ನು ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರು ತಿಳಿಸಿದ್ದಾರೆ.

ಸಾರ್ವಜನಿಕರ ಸುರಕ್ಷತೆ ದೃಷ್ಟಿಯಿಂದ ಇನ್ನುಳಿದ  ಜಲಪಾತಗಳಿಗೆ ಭೇಟಿಯನ್ನು ನಿರ್ಬಂಧಿಸಲಾಗಿರುತ್ತದೆ ಎಂದು ಅವರು ತಿಳಿಸಿದ್ದಾರೆ.

Share This Article