ಶಬರಿಮಲೆ ಅಯ್ಯಪ್ಪ ಸ್ವಾಮಿ ಸನ್ನಿಧಾನಕ್ಕೆ ತೆರಳುವ ಭಕ್ತರಿಗೆ ಮಹತ್ವದ ಮಾಹಿತಿ

khushihost
ಶಬರಿಮಲೆ ಅಯ್ಯಪ್ಪ ಸ್ವಾಮಿ ಸನ್ನಿಧಾನಕ್ಕೆ ತೆರಳುವ ಭಕ್ತರಿಗೆ ಮಹತ್ವದ ಮಾಹಿತಿ

ತಿರುವುನಂತಪುರಮ್, ೧೬- ಶಬರಿಮಲೆ ಅಯ್ಯಪ್ಪ ಸ್ವಾಮಿ ಸನ್ನಿಧಾನಕ್ಕೆ ತೆರಳುವ ಭಕ್ತರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ದೇಗುಲದ ಬಾಗಿಲನ್ನು ಇಂದು ತೆರೆಯಲಾಗುತ್ತಿದ್ದು, ಧಾರ್ಮಿಕ ವಿಧಿ ವಿಧಾನದ ಬಳಿಕ ಭಕ್ತರಿಗೆ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುತ್ತದೆ.

ನಾಳೆಯಿಂದ ಎರಡು ತಿಂಗಳುಗಳ ಕಾಲ ದರ್ಶನಕ್ಕೆ ಅವಕಾಶವಿರಲಿದ್ದು, ವರ್ಚುವಲ್ ಕ್ಯೂ ಮೂಲಕ ಮಾತ್ರ ಪ್ರವೇಶ ನೀಡಲಾಗುತ್ತದೆ ಎಂದು ತಿಳಿದುಬಂದಿದೆ. ಪ್ರತಿನಿತ್ಯ ಒಂದು ಲಕ್ಷಕ್ಕೂ ಅಧಿಕ ಭಕ್ತರಿಗೆ ದರ್ಶನಕ್ಕೆ ಅವಕಾಶವಿರಲಿದ್ದು, ಜನವರಿ 14ರಂದು ಮಕರ ಜ್ಯೋತಿ ದರ್ಶನ ಇರಲಿದೆ.

ಡಿಸೆಂಬರ್ 27ಕ್ಕೆ 41 ದಿನಗಳ ಮಂಡಲ ಪೂಜಾ ವಿಧಿಗಳು ಮುಕ್ತಾಯವಾಗಲಿದ್ದು, ನಂತರ ಮೂರು ದಿನಗಳ ಕಾಲ ಸಾರ್ವಜನಿಕ ದರ್ಶನಕ್ಕೆ ಅವಕಾಶ ಇರುವುದಿಲ್ಲ. ಡಿಸೆಂಬರ್ 30 ರಿಂದ ದೇಗುಲವನ್ನು ಮತ್ತೆ ತೆರೆಯಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

Share This Article