ಮಹಾರಾಷ್ಟ್ರ ಸಚಿವರ ಭೇಟಿ ಹಿನ್ನೆಲೆ ಪೊಲೀಸ ಆಯುಕ್ತರನ್ನು ಭೇಟಿಯಾಗಿ ಕರವೇ ಮನವಿ

khushihost
ಮಹಾರಾಷ್ಟ್ರ ಸಚಿವರ ಭೇಟಿ ಹಿನ್ನೆಲೆ ಪೊಲೀಸ ಆಯುಕ್ತರನ್ನು ಭೇಟಿಯಾಗಿ ಕರವೇ ಮನವಿ

ಬೆಳಗಾವಿ : ಶನಿವಾರ ಬೆಳಗಾವಿಯ ಮರಾಠಾ ಮಂದಿರದಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿ ಮತ್ತು ಶಿವಸೇನೆ ಆಯೋಜಿಸಿರುವ ಮಹಾರಾಷ್ಟ್ರದ ಇಬ್ಬರು ಸಚಿವರ ಸಭೆಗೆ ರಾಜ್ಯದ ಹಿತದೃಷ್ಟಿಯಿಂದ ಅವಕಾಶ ನೀಡಬಾರದು, ಇದಕ್ಕೆ ವಿರೋಧವಾಗಿ ನಡೆದುಕೊಂಡದೇ ಆದರೆ ಆಗುವ ಅನಾಹುತಕ್ಕೆ ರಾಜ್ಯ ಸರ್ಕಾರವೇ ಹೊಣೆ ಆಗುತ್ತದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಎಚ್ಚರಿಕೆ ನೀಡಿದೆ.

ನಗರ ಪೊಲೀಸ್ ಆಯುಕ್ತ ಡಾ.ಎಂ.ಬಿ.ಬೋರಲಿಂಗಯ್ಯ ಅವರನ್ನು ಭೇಟಿ ಮಾಡಿದ ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣಗೌಡ ಬಣದ ಪದಾಧಿಕಾರಿಗಳು ಯಾವುದೇ ಕಾರಣಕ್ಕೂ ಮಹಾರಾಷ್ಟ್ರ ಸಚಿವರಿಗೆ ಬೆಳಗಾವಿ ಪ್ರವೇಶಕ್ಕೆ ಅವಕಾಶ ನೀಡಬಾರದು ಎಂದು ಮನವಿ ಸಲ್ಲಿಸಿದ್ದಾರೆ.

ಬಳಿಕ ಸುದ್ದಿಗಾರರೊಂದಿಗೆ ಜೊತೆಗೆ ಮಾತನಾಡಿದ ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಟಿ, ಬೆಳಗಾವಿಯಲ್ಲಿ ಭಾಷಾ ಸಾಮರಸ್ಯಕ್ಕೆ ಧಕ್ಕೆ ತರುವ ಕೆಲಸ ಮಾಡುತ್ತಿದೆ. ಕರವೇ ಇದನ್ನು ವಿರೋಧಿಸುತ್ತದೆ. ಹೀಗಾಗಿ ಪೊಲೀಸ್ ಆಯುಕ್ತರನ್ನು ಭೇಟಿ ಮಾಡಿ ಯಾವುದೇ ಕಾರಣಕ್ಕೂ ಮಹಾರಾಷ್ಟ್ರ ಸಚಿವರ ಪ್ರವೇಶಕ್ಕೆ ಅವಕಾಶ ಮಾಡಿಕೊಡಬಾರದು. ಅವರು ಇಲ್ಲಿಗೆ ಬಂದು ಪ್ರಚೋದನಕಾರಿ ಭಾಷಣ ಮಾಡಿ ಭಾಷಾ ಸಾಮಾರಸ್ಯಕ್ಕೆ ಧಕ್ಕೆ ತರುವ ಕೆಲಸ ಮಾಡಲಿದ್ದಾರೆ ಎಂದು ಕಿಡಿಕಾರಿದರು.

ಒಂದು ವೇಳೆ ಮಹಾರಾಷ್ಟ್ರ ಸಚಿವರಿಗೆ ಅವಕಾಶ ಕೊಟ್ಟರೆ ಅದನ್ನು ಕರವೇ ಸಹಿಸುವುದಿಲ್ಲ. ಅವರು ಬಂದರೆ ಅವರಿಗೆ ಸರಿಯಾದ ಪಾಠ ಕಲಿಸುತ್ತೇವೆ. ಆ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾದ್ರೆ ಸರ್ಕಾರವೇ ಹೊಣೆ. ಹೀಗಾಗಿ ಅವರಿಗೆ ಕರ್ನಾಟಕ ಗಡಿ ಪ್ರವೇಶ ಮಾಡಲು ಅವಕಾಶ ಮಾಡಿಕೊಡಬಾರದು ಎಂದರು.

ಬೆಳಗಾವಿಯಲ್ಲಿನ ಮಹಾರಾಷ್ಟ್ರವಾದಿಗಳೊಂದಿಗೆ ಸಭೆ ನಡೆಸಲು ಮಹಾರಾಷ್ಟ್ರ ಸರಕಾರ ಸಚಿವರಾದ ಚಂದ್ರಕಾಂತ ಪಾಟೀಲ ಮತ್ತು ಶಂಭುರಾಜೆ ದೇಸಾಯಿ ಅವರನ್ನು ಡಿಸೆಂಬರ್ 3ರಂದು ಬೆಳಗಾವಿಗೆ ತೆರಳಲು ಸೂಚಿಸಿದೆ.

Share This Article