ಮೊದಲ ಹಂತದಲ್ಲಿ 11 ಸಾವಿರ ಪೌರ ಕಾರ್ಮಿಕರ ಖಾಯಂ

khushihost
ಮೊದಲ ಹಂತದಲ್ಲಿ 11 ಸಾವಿರ ಪೌರ ಕಾರ್ಮಿಕರ ಖಾಯಂ

ಬೆಂಗಳೂರು : ಮೊದಲ ಹಂತದಲ್ಲಿ 11 ಸಾವಿರ ಪೌರ ಕಾರ್ಮಿಕರ ಖಾಯಂ ನೇಮಕ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.

ನಗರದಲ್ಲಿ ಪೌರ ಕಾರ್ಮಿಕರ ಜೊತೆ ಉಪಹಾರ ಸೇವಿಸಿ ನಂತರ ಮಾತನಾಡಿದ ಸಿಎಂ, ಮೊದಲ ಹಂತದಲ್ಲಿ 11 ಸಾವಿರ ಪೌರ ಕಾರ್ಮಿಕರ ನೇಮಕ ಮಾಡಲಾಗುತ್ತದೆ. ನಂತರ ಇನ್ನುಳಿದ ಕಾರ್ಮಿಕ ಖಾಯಂ ನೇಮಕ ಮಾಡಲಾಗುತ್ತದೆ ಎಂದು ಹೇಳಿದರು.

ಮುಖ್ಯಮಂತ್ರಿಯಾಗಿ ನಾನು ನನ್ನ ಕರ್ತವ್ಯಮಾಡಿದ್ದೇನೆ, ಅವರ ಪರಿಶ್ರಮಕ್ಕೆ ತಕ್ಕ ಫಲ ಸಿಕ್ಕಿದೆ, ಶೀಘ್ರ ಪೌರ ಕಾರ್ಮಿಕರ ಖಾಯಂ ಬಗ್ಗೆ ಕ್ರಮ ಕೈಗೊಳ್ಳಲಿದ್ದೇನೆ ಎಂದು ತಿಳಿಸಿದರು.

 

Share This Article