ನವೆಂಬರ 1ರಿಂದಲೇ ಪೂರ್ವಾನ್ವಯವಾಗುವಂತೆ ಎಸ್ ಸಿ, ಎಸ್ ಟಿ ಮೀಸಲಾತಿ ಹೆಚ್ಚಳ

khushihost
ನವೆಂಬರ 1ರಿಂದಲೇ ಪೂರ್ವಾನ್ವಯವಾಗುವಂತೆ ಎಸ್ ಸಿ, ಎಸ್ ಟಿ ಮೀಸಲಾತಿ ಹೆಚ್ಚಳ

ಬೆಂಗಳೂರು: ಶಿಕ್ಷಣ ಸಂಸ್ಥೆಗಳಲ್ಲಿ ಪರಿಶಿಷ್ಟ ವರ್ಗಗಳ ಮೀಸಲಾತಿ ಹೆಚ್ಚಳದ ಸುಗ್ರೀವಾಜ್ಞೆಯು ನವೆಂಬರ್ 1ರಿಂದಲೇ ಪೂರ್ವಾನ್ವಯವಾಗುವಂತೆ ಅನುಷ್ಠಾನಗೊಳಿಸಬೇಕು ಎಂದು ಸಮಾಜ‌ ಕಲ್ಯಾಣ ಇಲಾಖೆ ಆದೇಶಿಸಿದೆ.

ಸುಗ್ರೀವಾಜ್ಞೆ ಪ್ರಕಾರ, ಮೀಸಲಾತಿ ಪ್ರಮಾಣವನ್ನು ಪರಿಶಿಷ್ಟ ಜಾತಿಗೆ ಶೇ.15 ರಿಂದ ಶೇ.17ಕ್ಕೆ ಮತ್ತು ಪರಿಶಿಷ್ಟ ಪಂಗಡಕ್ಕೆ ಶೇ. 3ರಿಂದ ಶೇ.7ಕ್ಕೆ ಹೆಚ್ಚಿಸಲಾಗಿದೆ.

ರಾಜ್ಯ ಸರ್ಕಾರದಿಂದ ನಿರ್ವಹಿಸಲಾಗುತ್ತಿರುವ ಅಥವಾ ರಾಜ್ಯ ನಿಧಿಗಳಿಂದ ಅನುದಾನ ಪಡೆಯುತ್ತಿರುವ ಯಾವುದೇ ಶಾಲೆ, ಕಾಲೇಜು ಅಥವಾ ಇತರೆ ಶೈಕ್ಷಣಿಕ ಸಂಸ್ಥೆಗಳಿಗೆ ಈ ಮೀಸಲಾತಿ ಹೆಚ್ಚಳ ಅನ್ವಯವಾಗಲಿದೆ.

ಶೈಕ್ಷಣಿಕ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳ ಪ್ರವೇಶ ಪ್ರಕ್ರಿಯೆಯಲ್ಲಿ ಮೀಸಲಾತಿ ಪ್ರಮಾಣವನ್ನು ಅನುಷ್ಠಾನಗೊಳಿಸಬೇಕು. ಆದರೆ, 01-11-2022 ಮುಂಚೆ ಈಗಾಗಲೇ ಪ್ರವೇಶ ಪ್ರಕ್ರಿಯೆ ಪೂರ್ಣಗೊಂಡಿದ್ದಲ್ಲಿ ಈ ಆದೇಶ ಅನ್ವಯಿಸುವುದಿಲ್ಲ ಎಂದು ಸ್ಪಷ್ಟಪಡಿಸಿದೆ.

Share This Article