ವಿರೋಧ ಪಕ್ಷದ ನಾಯಕನಾಗುವ ಅರ್ಹತೆ ಒಬ್ಬರಿಗೂ ಇಲ್ಲದಿರುವುದು ನಾಚಿಕೆಗೇಡು -ಕಾಂಗ್ರೆಸ್ ವ್ಯಂಗ್ಯ

khushihost
ವಿರೋಧ ಪಕ್ಷದ ನಾಯಕನಾಗುವ ಅರ್ಹತೆ ಒಬ್ಬರಿಗೂ ಇಲ್ಲದಿರುವುದು ನಾಚಿಕೆಗೇಡು -ಕಾಂಗ್ರೆಸ್ ವ್ಯಂಗ್ಯ

ಬೆಂಗಳೂರು: ಕರ್ನಾಟಕದದ ಇತಿಹಾಸದಲ್ಲಿ ವಿರೋಧ ಪಕ್ಷದ ನಾಯಕನಿಲ್ಲದೇ ನಡೆಯುತ್ತಿರುವ ಮೊದಲ ಅಧಿವೇಶನವಿದು. ಬಿಜೆಪಿಯ 66 ಶಾಸಕರಲ್ಲಿ ವಿರೋಧ ಪಕ್ಷದ ನಾಯಕನಾಗುವ ಅರ್ಹತೆ ಇರುವ ಒಬ್ಬನೂ ಶಾಸಕನಿಲ್ಲದಿರುವುದು ಅತ್ಯಂತ ನಾಚಿಕೆಗೇಡು ಎಂದು ಕಾಂಗ್ರೆಸ್  ವ್ಯಂಗ್ಯವಾಡಿದೆ.

ಕುರಿತು ಸೋಮವಾರ ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್, ಸರ್ಕಾರ ರಚನೆ ಆಯಿತು, ನಮ್ಮ ಸರ್ಕಾರ ಟೇಕಾಫ್ ಆಗಿ ಹಲವು ದಿನಗಳಾದವು, ನಮ್ಮ ಗ್ಯಾರಂಟಿ ಯೋಜನೆಗಳೂ ಜಾರಿ ಆದವು. ಸದನವೂ ಪ್ರಾರಂಭವಾಯಿತು. ಆದರೆ ಎಲ್ಲಿ ನಿಮ್ಮ ವಿರೋಧ ಪಕ್ಷದ ನಾಯಕ? ಬಿಜೆಪಿಗೆ ವಿರೋಧ ಪಕ್ಷದ ನಾಯಕನ ಗ್ಯಾರಂಟಿಯನ್ನೂ ಕೊಡಲಾಗುತ್ತಿಲ್ಲ ಎಂದರೆ ಎಂತಹ ಹೀನಾಯ ಸ್ಥಿತಿಯಲ್ಲಿದೆ ಎಂದು ಹೇಳಿದೆ.

ಬಿಜೆಪಿಯ 66 ಶಾಸಕರಲ್ಲಿ ವಿರೋಧ ಪಕ್ಷದ ನಾಯಕನಾಗುವ ಅರ್ಹತೆ ಇರುವ ಒಬ್ಬ ಶಾಸಕನೂ ಇಲ್ಲದಿರುವುದು ಅತ್ಯಂತ ನಾಚಿಕೆಗೇಡು. ಕರ್ನಾಟಕದದ ಇತಿಹಾಸದಲ್ಲಿ ವಿರೋಧ ಪಕ್ಷದ ನಾಯಕನಿಲ್ಲದೇ ನಡೆಯುತ್ತಿರುವ ಮೊದಲ ಅಧಿವೇಶನ ಇದು. ಬಿಜೆಪಿ ಅಧಿಕಾರದಲ್ಲಿದ್ದಾಗಲೂ ಪ್ರಜಾಪ್ರಭುತ್ವವನ್ನು ಗೌರವಿಸಲಿಲ್ಲ, ವಿರೋಧ ಪಕ್ಷದಲ್ಲಿದ್ದಾಗಲೂ ಗೌರವಿಸುತ್ತಿಲ್ಲ ಎಂದು ಕಾಂಗ್ರೆಸ್‌ ಹೇಳಿದೆ.

ಬಿಜೆಪಿಗೆ ವಿರೋಧ ಪಕ್ಷದ ನಾಯಕನಗ್ಯಾರಂಟಿಯೂ ಇಲ್ಲ!. ವಿರೋಧ ಪಕ್ಷದ ನಾಯಕನಿಲ್ಲದೆ ಕಲಾಪ ನಡೆಯುತ್ತಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಕಪ್ಪು ಚುಕ್ಕೆ. ಕಪ್ಪು ಚುಕ್ಕೆಯನ್ನಿಟ್ಟಿದ್ದು ಬಿಜೆಪಿ ಎಂದು ಆರೋಪಿಸಿದೆ.

ವಿರೋಧ ಪಕ್ಷದ ನಾಯಕನ ಹುದ್ದೆಯನ್ನೂ ಮಾರಾಟಕ್ಕೆ ಇಡಲಾಗಿದೆಯೇ?. ಮುಖ್ಯಮಂತ್ರಿ ಹುದ್ದೆಗೆ 2,500 ಕೋಟಿ ರೂ. ಫಿಕ್ಸ್ ಮಾಡಲಾಗಿತ್ತು. ಈಗ ವಿರೋಧ ಪಕ್ಷದ ನಾಯಕನ ಹುದ್ದೆ ಎಷ್ಟಕ್ಕೆ ಬಿಕರಿಯಾಗುತ್ತಿದೆ? ಚೌಕಾಶಿ ವ್ಯವಹಾರಕ್ಕಾಗಿಯೇ ಆಯ್ಕೆ ಪ್ರಕ್ರಿಯೆ ವಿಳಂಬವಾಗುತ್ತಿದೆಯೇ? ಇದಕ್ಕೆ ಬಿಜೆಪಿ ಉತ್ತರಿಸಬೇಕು ಎಂದು ಕಾಂಗ್ರೆಸ್ ಹೇಳಿದೆ.

ಪ್ರೀತಿಯ ಬಿಜೆಪಿ, ಸದನ ಪ್ರಾರಂಭವಾಗುವ ಮೊದಲೇ ವಿರೋಧ ಪಕ್ಷದ ನಾಯಕನನ್ನು ವರಿಷ್ಠರು ಆಯ್ಕೆ ಮಾಡುತ್ತಾರೆ ಎಂದು ಗ್ಯಾರಂಟಿ ನೀಡಿದ್ದಿರಿ. ನಿಮ್ಮ ಹೈಕಮಾಂಡ್ ಕನಿಷ್ಠ ವಿರೋಧ ಪಕ್ಷದ ನಾಯಕನ ಆಯ್ಕೆಯಲ್ಲೂ ನಿಮಗೆ ಗ್ಯಾರಂಟಿ ನೀಡದಿರುವುದು ರಾಜಕೀಯ ಇತಿಹಾಸದಲ್ಲಿಯೇ ಅತ್ಯಂತ ಶೋಚನಿಯ ಸಂಗತಿ. ಪಾಪ! ಎಂದು ಬಿಜೆಪಿ ಮಾಡಿದ್ದ ಟ್ವೀಟ್ ಸ್ಕ್ರೀನ್ ಶಾಟ್‌ ನ್ನು ಕಾಂಗ್ರೆಸ್ ಹಂಚಿಕೊಂಡಿದೆ.

Share This Article