ಯಡಿಯೂರಪ್ಪ ನೇತೃತ್ವದಲ್ಲಿ ನಾಳೆಯಿಂದ ಬಿಜೆಪಿಯ ಜನಸಂಕಲ್ಪ ಯಾತ್ರೆ 

khushihost
ಯಡಿಯೂರಪ್ಪ ನೇತೃತ್ವದಲ್ಲಿ ನಾಳೆಯಿಂದ ಬಿಜೆಪಿಯ ಜನಸಂಕಲ್ಪ ಯಾತ್ರೆ 

ಬೆಂಗಳೂರು : ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ರಾಜ್ಯ ಬಿಜೆಪಿ ಅಕ್ಟೋಬರ 11 ರಿಂದ ಜನಸಂಕಲ್ಪ ಯಾತ್ರೆ ನಡೆಸಲು ಬಿಜೆಪಿ ಭರ್ಜರಿ ಸಿದ್ದತೆ ನಡೆಸುತ್ತಿದೆ.

ಕಾಂಗ್ರೆಸ್ ಇತ್ತ ಕಡೆ ರಾಷ್ಟ್ರ ಮಟ್ಟದಲ್ಲಿ ಭಾರತ ಜೋಡೋ ಯಾತ್ರೆ ನಡೆಸುತ್ತಿದ್ದರೆ, ಇನ್ನೊಂದು ಕಡೆ ರಾಜ್ಯ ಬಿಜೆಪಿ ನಾಯಕರು ಜನಸಂಕಲ್ಪ ಯಾತ್ರೆ ನಡೆಸಲು ಸಿದ್ದರಾಗಿದ್ದಾರೆ. ಮುಖ್ಯಮಂತ್ರಿ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ರಾಯಚೂರು ತಾಲೂಕಿನ ಗಿಲ್ಲೆಸುಗೂರಿನಿಂದ ಅಕ್ಟೋಬರ 11 ರಂದು ಬಿಜೆಪಿ ಸಂಕಲ್ಪ ಯಾತ್ರೆ ಹೊರಡಲಿದೆ. ಈ ಹಿನ್ನೆಲೆ ಆ. 11 ರಂದು ಗ್ರಾಮದಲ್ಲಿ ಸಮಾವೇಶ ನಡೆಯಲಿದೆ.

ರಾಜ್ಯದ 100 ವಿಧಾನಸಭೆ ಕ್ಷೇತ್ರಗಳಲ್ಲಿ ಯಾತ್ರೆ ಸಮಾವೇಶ ನಡೆಸಲಾಗುವುದು, ಪಕ್ಷದ ರಾಜ್ಯಾಧ್ಯಕ್ಷ ನೇತೃತ್ವದ ಮತ್ತೊಂದು ತಂಡ 100 ಕ್ಷೇತ್ರಗಳಲ್ಲಿ ಯಾತ್ರೆ ಕೈಗೊಳ್ಳಲಿದೆ ಎಂದು ಬಿಜೆಪಿ ಎಸ್ಟಿ ಮೋರ್ಚಾ ರಾಜ್ಯಾಧ್ಯಕ್ಷ ತಿಪ್ಪರಾಜು ಹವಾಲ್ದಾರ ಮಾಹಿತಿ ನೀಡಿದ್ದಾರೆ.

Share This Article