ಮುಳುಗುವ ಕಾಂಗ್ರೆಸ್ ಹಡಗಿಗೆ ಖರ್ಗೆ ನಾವಿಕ

khushihost
ಮುಳುಗುವ ಕಾಂಗ್ರೆಸ್ ಹಡಗಿಗೆ ಖರ್ಗೆ ನಾವಿಕ

ಬಾಗಲಕೋಟ: ಮುಳುಗುವ ಕಾಂಗ್ರೆಸ್ ಹಡಗಿಗೆ ಮಲ್ಲಿಕಾರ್ಜುನ ಖರ್ಗೆರನ್ನು ನಾವಿಕನನ್ನಾಗಿ ಮಾಡುತ್ತಿದ್ದಾರೆ. ಅವರು ಏನೇ ಪ್ರಯೋಗ ಮಾಡಿದರೂ ಈ ದೇಶದಲ್ಲಿ ಕಾಂಗ್ರೆಸ್ ಉಳಿಯಲು ಸಾಧ್ಯವಿಲ್ಲ ಎಂದು ಸಚಿವ ಗೋವಿಂದ ಕಾರಜೋಳ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಲ್ಲಿಕಾರ್ಜುನ ಖರ್ಗೆ ನಾಯಕತ್ವದಿಂದ ಯಾವುದೇ ಪರಿಣಾಮ ಸಾಧ್ಯವಿಲ್ಲ. ದೇಶದಲ್ಲಿ ಕಾಂಗ್ರೆಸ್ ಅಧಿಕಾರ ನಡೆಸುವಾಗ ಮಾಡಿದ್ದರೆ ಅದಕ್ಕೊಂದು ಅರ್ಥ ಇರುತ್ತಿತ್ತು. ರಾಜ್ಯದಲ್ಲಿ ಖರ್ಗೆಯವರನ್ನ ಮುಖ್ಯಮಂತ್ರಿ ಮಾಡಬೇಕಿತ್ತು ಯಾಕೆ ಮಾಡಲಿಲ್ಲ ಎಂದು ಗೋವಿಂದ ಕಾರಜೋಳ ಪ್ರಶ್ನಿಸಿದರು.

ದೀನ, ದಲಿತರನ್ನ ವೋಟ್ ಬ್ಯಾಂಕ್ ಮಾಡಲು ರಾಜಕಾರಣ ಮಾಡುತ್ತಾರೆ. ಅವರನ್ನು ಉದ್ಧಾರ ಮಾಡುವುದಾಗಲಿ, ಗೌರವ ಕೊಡುವುದಾಗಲಿ ಕಾಂಗ್ರೆಸ್​ನವರು ಯಾವತ್ತೂ ಮಾಡುವುದಿಲ್ಲ. ಕಾಂಗ್ರೆಸ್ ಮುಳುಗುತ್ತಿದೆ ಎಂದು ಗೊತ್ತಾಗಿದೆ. ಹೀಗಾಗಿ ಇಂತಹ ಪ್ರಯತ್ನಗಳನ್ನು ಮಾಡುತ್ತಿದ್ದಾರೆ ಎಂದು ಹೇಳಿದರು.

Share This Article