ಕಿತ್ತೂರು ತಹಶೀಲ್ದಾರ ಎರಡು ದಿನ ಹಿಂಡಲಗಾ ಜೈಲಿಗೆ

khushihost
ಕಿತ್ತೂರು ತಹಶೀಲ್ದಾರ ಎರಡು ದಿನ ಹಿಂಡಲಗಾ ಜೈಲಿಗೆ

ಬೆಳಗಾವಿ : ಜಮೀನು ಖಾತೆ ಬದಲಾವಣೆ ಮಾಡಿಕೊಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಕಿತ್ತೂರು ತಹಶೀಲ್ದಾರ ಮತ್ತು ಗುಮಾಸ್ತ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಸಿಕ್ಕಿಬಿದ್ದಿದ್ದರು.

ಇಂದು ಇಬ್ಬರು ಆರೋಪಿಗಳನ್ನು ಕೋರ್ಟ್ ಗೆ ಹಾಜರುಪಡಿಸಿದ್ದು, ವಿಚಾರಣೆ ನಡೆಸಿದ ಕೋರ್ಟ ತಹಶೀಲ್ದಾರ್ ಮತ್ತು ಗುಮಾಸ್ತನಿಗೆ ನವೆಂಬರ್ 28 ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ. ಈ ಮೂಲಕ ಇಬ್ಬರು ಆರೋಪಿಗಳನ್ನು ಹಿಂಡಲಗಾ ಜೈಲಿಗೆ ಕಳುಹಿಸಲಾಗಿದೆ.

ವ್ಯಕ್ತಿಯೋರ್ವರಿಂದ 2 ಲಕ್ಷ ರೂ. ಸ್ವೀಕರಿಸುತ್ತಿದ್ದಾಗ ಸಿಕ್ಕಿಬಿದ್ದಿದ್ದ ಆಗಿ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಸಿಕ್ಕಿಬಿದ್ದಿದ್ದಾರೆ.

ಕಿತ್ತೂರು ತಹಶೀಲ್ದಾರ ಸೋಮಲಿಂಗಪ್ಪ ಹಲಗಿ ಹಾಗೂ ಗುಮಾಸ್ತ ಪ್ರಸನ್ನ ಜಿ ಲೋಕಾಯುಕ್ತ ಬಲೆಗೆ ಬಿದ್ದವರು. ಕಿತ್ತೂರು ತಾಲೂಕಿನ ಖೊದಾನಪೂರ ಗ್ರಾಮದ ಬಾಪುಸಾಹೇಬ ಎಂಬುವವರು ತಮ್ಮ 10 ಎಕರೆ ಜಮೀನಿನ ಖಾತೆ ಬದಲಾವಣೆಗೆ ಅರ್ಜಿ ಸಲ್ಲಿಸಿದ್ದರು.

ಈ ವೇಳೆ ಕಿತ್ತೂರು ತಹಶೀಲ್ದಾರ 5 ಲಕ್ಷ ರೂ. ಲಂಚದ ಬೇಡಿಕೆ ಇಟ್ಟಿದ್ದರು.ಈ ಬಗ್ಗೆ ಬಾಪುಸಾಹೇಬ್ ಪುತ್ರ ರಾಜೇಂದ್ರ ಲೋಕಾಯುಕ್ತ ಅಧಿಕಾರಿಗಳಿಗೆ ದೂರು ಸಲ್ಲಿಸಿದ್ದರು.ಅಂತೆಯೇ ತಹಶೀಲ್ದಾರ್ ಮತ್ತು ಗುಮಾಸ್ತ 2 ಲಕ್ಷ ರೂ. ಸ್ವೀಕರಿಸುತ್ತಿದ್ದಾಗ ಆಗಿ ಲೋಕಾಯುಕ್ತ ಅಧಿಕಾರಿಗಳ ಸಿಕ್ಕಿಬಿದ್ದಿದ್ದಾರೆ..

Share This Article