ಮಹೇಶ ಶೆಟ್ಟಿ ತಿಮರೋಡಿ ಗಡಿಪಾರು

khushihost
ಮಹೇಶ ಶೆಟ್ಟಿ ತಿಮರೋಡಿ ಗಡಿಪಾರು

ಬೆಳ್ತಂಗಡಿ: ಜಿಲ್ಲೆಯ ವಿವಿಧೆಡೆ ಪೊಲೀಸ್ ಠಾಣೆಯಲ್ಲಿ ಸುಮಾರು 32ಕ್ಕೂ ಅಧಿಕ ಪ್ರಕರಣ ದಾಖಲಾಗಿರುವ ಹಿನ್ನೆಲೆಯಲ್ಲಿ ಉಜಿರೆ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಜಿಲ್ಲೆಯಿಂದ ಗಡಿಪಾರು ಮಾಡಿ ಆದೇಶಿಸಲಾಗಿದೆ.

ಪುತ್ತೂರು ಸಹಾಯಕ ಆಯುಕ್ತರಾದ (ಎಸಿ) ಸ್ಟೆಲ್ಲಾ ವರ್ಗಿಸ್ ಗೆ ಬೆಳ್ತಂಗಡಿ ಪೊಲೀಸರು ಪ್ರಕರಣದ ಬಗ್ಗೆ ವರದಿ ನೀಡಿದ್ದನ್ನು ಪರಿಶೀಲನೆ ನಡೆಸಿ ವರದಿಯ ಆಧಾರದಲ್ಲಿ ಸೆ.18 ರಂದು ರೌಡಿಶೀಟರ್ ಮಹೇಶ್ ಶೆಟ್ಟಿ ತಿಮರೋಡಿಯನ್ನು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಒಂದು ವರ್ಷಗಳ ಅವಧಿಗೆ ಗಡಿಪಾರು ಮಾಡಿ ಆದೇಶ ಮಾಡಲಾಗಿದೆ.

ಗಡಿಪಾರು ಮಾಡಿದ ಆದೇಶ ಪ್ರತಿ ಬಂಟ್ವಾಳ ಉಪವಿಭಾಗ ಡಿವೈಎಸ್ಪಿಗೆ ಬಂದ ಬಳಿಕ ಗಡಿಪಾರು ಮಾಡುವ ಕಾನೂನು ಕ್ರಮ ಕೈಗೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.

Share This Article