ಕೆಪಿಟಿಸಿಎಲ್ ನೇಮಕಾತಿ ಪರೀಕ್ಷೆ ಅಕ್ರಮ : ಗೋಕಾಕದಲ್ಲಿ ಮುಖ್ಯ ಆರೋಪಿ ಬಂಧನ 

khushihost
ಕೆಪಿಟಿಸಿಎಲ್ ನೇಮಕಾತಿ ಪರೀಕ್ಷೆ ಅಕ್ರಮ : ಗೋಕಾಕದಲ್ಲಿ ಮುಖ್ಯ ಆರೋಪಿ ಬಂಧನ 

ಬೆಳಗಾವಿ : ಕೆಪಿಟಿಸಿಎಲ್ ನೇಮಕಾತಿ ಪರೀಕ್ಷೆಯಲ್ಲಿ ನಡೆದ ಅಕ್ರಮ ಪ್ರಕರಣ ಸಂಬಂಧ ಬೆಳಗಾವಿ ಪೊಲೀಸರು ಪ್ರಮುಖ ಆರೋಪಿಯನ್ನು ಬಂಧಿಸಿದೆ.

ಬೆಳಗಾವಿ ನಗರದ ಸಂಜೀವ ಲಕ್ಷ್ಮಣ ಭಂಡಾರಿ ಬಂಧಿತ ಆರೋಪಿ. ಪರೀಕ್ಷಾ ಅಕ್ರಮ ಬಯಲಿಗೆ ಬಂದಾಗಿನಿಂದ ತಲೆಮಲೆಸಿಕೊಂಡಿದ್ದ ಸಂಜೀವ ಭಂಡಾರಿಗೆ ಬಲೆ ಬೀಸಿದ್ದ ಪೊಲೀಸರು ಗೋಕಾಕದಲ್ಲಿ ಆತನನ್ನು ಬಂಧಿಸಿದ್ದಾರೆ.

ಆರೋಪಿ ಸಂಜೀವ ಭಂಡಾರಿಯನ್ನು ಗೋಕಾಕ ಹೆಚ್ಚುವರಿ ಜಿಲ್ಲಾ ಮತ್ತು ಪ್ರಧಾನ ಸತ್ರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಆರೋಪಿಯನ್ನು ಹೆಚ್ಚಿನ ವಿಚಾರಣೆಗಾಗಿ 7 ದಿನಗಳ ಕಾಲ ಪೊಲೀಸ್ ವಶಕ್ಕೆ ಹಸ್ತಾಂತರಿಸುವಂತೆ ನ್ಯಾಯಾಲಯ ಆದೇಶಿಸಿದೆ.

Share This Article