ಕಾರ್ ಅಪಘಾತ: ಸಚಿವೆ ಲಕ್ಷ್ಮೀ ಹೆಬ್ಬಾಳಕರ, ಶಾಸಕ ಚನ್ನರಾಜ ಹಟ್ಟಿಹೊಳಿಗೆ ಗಾಯ

khushihost
ಕಾರ್ ಅಪಘಾತ: ಸಚಿವೆ ಲಕ್ಷ್ಮೀ ಹೆಬ್ಬಾಳಕರ, ಶಾಸಕ ಚನ್ನರಾಜ ಹಟ್ಟಿಹೊಳಿಗೆ ಗಾಯ

ಬೆಳಗಾವಿ : ಬೆಂಗಳೂರಿನಲ್ಲಿ ನಡೆದ ಸಿಎಲ್ ಪಿ ಸಭೆ ಮುಗಿಸಿಕೊಂಡು ಬೆಳಗಾವಿಗೆ ಬರುತ್ತಿದ್ದ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹಾಗೂ ವಿಧಾನ ಪರಿಷತ್ತಿನ ಸದಸ್ಯ ಚನ್ನರಾಜ ಹಟ್ಟಿಹೊಳಿ ಕಾರು ಮಂಗಳವಾರ ಬೆಳಗ್ಗೆ ಅಪಘಾತಕ್ಕೀಡಾಗಿದ್ದು, ಅವರಿಬ್ಬರಿಗೂ ಗಾಯಗಳಾಗಿವೆ. ಆದರೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಕಿತ್ತೂರು ತಾಲೂಕಿನ ಅಂಬಡಗಟ್ಟಿ ಬಳಿ ಬೆಳಿಗ್ಗೆ 5.30ರ ಸುಮಾರಿಗೆ ಅಪಘಾತ ನಡೆದಿದೆ. ಕಾರಿಗೆ ನಾಯಿ ಅಡ್ಡ ಬಂದ್ ಹಿನ್ನೆಲೆಯಲ್ಲಿ ಚಾಲಕನ‌ ನಿಯಂತ್ರಣ ತಪ್ಪಿ ಮರಕ್ಕೆ ಅಪ್ಪಳಿಸಿದೆ. ಕಾರು ನುಜ್ಜು ನುರಾಗಿದ್ದು, ಬೆಳಗಾವಿ ಖಾಸಗಿ ಆಸ್ಪತ್ರೆಗೆ ಸಚಿವೆ ಲಕ್ಷ್ಮೀ ದಾಖಲಾಗಿದ್ದಾರೆ. ಕಿತ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗೆ ಕುತ್ತಿಗೆ ಹಾಗೂ ಬೆನ್ನಿಗೆ ಪೆಟ್ಟಾಗಿದೆ. ಅವರಿಗೆ ಶುಗರ್ ಇರುವುದವರಿಂದ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರಿಗೆ ಸಿಟಿ ಸ್ಕ್ಯಾನಿಂಗ್ ಮಾಡಿದಾಗ ಎಂಆರ್ ಐ ಮಾಡಿದಾಗ ಎಲ್ 1 ಮತ್ತು ಎಲ್ 4 ಗೆ ಪೆಟ್ಟಾಗಿದೆ. ಯಾವುದೇ ಆತಂಕ ಪಡುವ ಅಗತ್ಯ ಇಲ್ಲ, ಅವರು‌ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಇನ್ನು ಅವರ ಸಹೋದರ, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರಿಗೆ ಸಿಟಿ ಸ್ಕ್ಯಾನಿಂಗ್ ಮಾಡಿದಾಗ ಮೆದುಳಿಗೆ ಬಾವು ಬಂದಿದೆ. ಅದಕ್ಕೆ ಅವರು ಚಿಕಿತ್ಸೆ ಪಡೆದು ಮನೆಗೆ ಹೋಗಿ ಬಂದು ಆಸ್ಪತ್ರೆಗೆ ದಾಖಲಾಗುವುದಾಗಿ ಹೇಳಿದ್ದಾರೆ ಎಂದರು.

ಲಕ್ಷ್ಮೀ ಹೆಬ್ಬಾಳಕರ ಒಂದು ತಿಂಗಳ ವಿಶ್ರಾಂತಿ ಪಡೆಯಬೇಕು ಹಾಗೂ ಚನ್ನರಾಜ್ 8 ದಿನ ವಿಶ್ರಾಂತಿ ಪಡೆಯಬೇಕಾಗುತ್ತದೆ ಎನ್ನಲಾಗಿದೆ.

ಕಾರಿನಲ್ಲಿ ಸಚಿವೆಯ ಗನ್ ಮ್ಯಾನ್ ಮತ್ತು ಆಪ್ತ ಸಹಾಯಕ ಕೂಡ ಪ್ರಯಾಣಿಸುತ್ತಿದ್ದರು. ಅವರಿಗೆ ಯಾವುದೇ ಗಾಯಗಳಾಗಿಲ್ಲ.

ಲಕ್ಷ್ಮಿ ಅವರು ಕಾರಿನಿಂದ ಇಳಿದು ಆಸ್ಪತ್ರೆಯ ವೀಲ್ ಚೇರ್ ಮೇಲೆ ಕುಳಿತುಕೊಳ್ಳಲು ಸುಮಾರು ಮೂರು ನಿಮಿಷ ತೆಗೆದುಕೊಂಡರು.

ಕಾರ್ ಚಾಲಕ ಬೆಂಗಳೂರು ಮೂಲದ ಗಂಗಾಧರಯ್ಯ ಅವರ ಕಾರ್ ಚಾಲನಾ ಅನುಮತಿ ಪತ್ರ 2034ರ ವರೆಗಿದೆ. ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article