ನಾನು ಶಾಸಕನಾಗಿರುವ ಅವಧಿಯಲ್ಲಿ ಯಾವುದೇ ಕೋಮು ಗಲಭೆ ನಡೆದಿಲ್ಲ : ಶಾಸಕ ಯಾದವಾಡ 

khushihost
ನಾನು ಶಾಸಕನಾಗಿರುವ ಅವಧಿಯಲ್ಲಿ ಯಾವುದೇ ಕೋಮು ಗಲಭೆ ನಡೆದಿಲ್ಲ : ಶಾಸಕ ಯಾದವಾಡ 

ಬೆಳಗಾವಿ: ನಿಮ್ಮ ಮನೆಯಲ್ಲಿರುವ ಮಕ್ಕಳಿಗೆ ಬುದ್ಧಿ ಹೇಳಿ. ಸಮಾಜದಲ್ಲಿ ಗಲಭೆಗೆ ಕುಮ್ಮಕ್ಕು ನೀಡಿ, ಪ್ರಚೋದನೆ ನೀಡಿದವರು ಎಷ್ಟೇ ಪ್ರಭಾವಿ ಇದ್ದರೂ ಬಿಡುವುದಿಲ್ಲ ಎಂದು ಶಾಸಕ ಮಹಾದೇವಪ್ಪ ಯಾದವಾಡ ಎಚ್ಚರಿಕೆ ನೀಡಿದ್ದಾರೆ.

ಜಿಲ್ಲೆಯ ರಾಮದುರ್ಗ ಪಟ್ಟಣದಲ್ಲಿ ಶ್ರೀರಾಮ ಸೇನೆ ಕಾರ್ಯಕರ್ತ ಸೇರಿ ಇಬ್ಬರಿಗೆ ಚಾಕು ಇರಿತ ಪ್ರಕರಣ ನಡೆದಿತ್ತು. ಈ ವಿಚಾರವಾಗಿ ಮಾತನಾಡಿರುವ ಅವರು, ಮನೆಯಲ್ಲಿ ಬುದ್ಧಿ ಹೇಳದೇ ಇದ್ದರೆ ರಾಮದುರ್ಗದಲ್ಲಿ ಮುಂದೆ ಬೇರೆಯದೇ ನಡೆಯುತ್ತದೆ. ನಾನು ಶಾಸಕನಾದ ಅವಧಿಯಲ್ಲಿ ಒಮ್ಮೆಯೂ ಹಿಂದೂ ಮುಸ್ಲಿಂ ಗಲಭೆಯಾಗಲು ಅವಕಾಶ ಕೊಟ್ಟಿಲ್ಲ.

ರಾಮದುರ್ಗ ಕ್ಷೇತ್ರದಲ್ಲಿ  ಈ ವರೆಗೆ ಹಿಂದೂ ಮುಸ್ಲಿಂ ಮಧ್ಯೆ ಒಂದೂ ಗಲಭೆ ಆಗಿಲ್ಲ. ಕಿಡಿಗೇಡಿಗಳನ್ನು ಹದ್ದು ಬಸ್ತಿನಲ್ಲಿಡಲು ಗೃಹಸಚಿವರು, ಮುಖ್ಯಮಂತ್ರಿಗೆ ಮನವರಿಕೆ ಮಾಡುತ್ತೇನೆ ಎಂದು ಹೇಳಿದ್ದಾರೆ.

Share This Article