ಸಿಡಿಲು ಬಡಿದು ತಾಯಿ,ಇಬ್ಬರು ಮಕ್ಕಳು ಸೇರಿ ನಾಲ್ವರು ಸಾವು

khushihost
ಸಿಡಿಲು ಬಡಿದು ತಾಯಿ,ಇಬ್ಬರು ಮಕ್ಕಳು ಸೇರಿ ನಾಲ್ವರು ಸಾವು

ಯಾದಗಿರಿ: ಸಿಡಿಲು ಬಡಿದು ತಾಯಿ, ಇಬ್ಬರು ಮಕ್ಕಳು ಸೇರಿ ನಾಲ್ವರು ಸಾವನ್ನಪ್ಪಿರುವ ದಾರುಣ ಘಟನೆ ಗುರುಮಠಕಲ್‌ ತಾಲೂಕಿನ ಎಸ್ ಹೊಸಹಳ್ಳಿ ಬಳಿ ನಡೆದಿದೆ.

ಗಾಜರಕೋಟ ಗ್ರಾಮದ ಮೋನಮ್ಮ (25) ಭಾನು (4) ಶ್ರೀನಿವಾಸ್ (2), ಸಾಬಣ್ಣ (17) ಮೃತ ದುರ್ದೈವಿಗಳು. ಓರ್ವನಿಗೆ ಗಾಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಧ್ಯಾಹ್ನ ಯಾದಗಿರಿಯಿಂದ ಊರಿಗೆ ಹೋಗುವಾಗ ಸುರಿದ ಮಳೆಯಿಂದಾಗಿ ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ. ಗುರುಮಠಕಲ್‌ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share This Article