ಚಳಿಗೆ ನಡುಗುತ್ತಿದೆ ಉತ್ತರ ಕರ್ನಾಟಕ

khushihost
ಚಳಿಗೆ ನಡುಗುತ್ತಿದೆ ಉತ್ತರ ಕರ್ನಾಟಕ

ಧಾರವಾಡ: ಈ ಬಾರಿ ಮಳೆಯ ಅಬ್ಬರದಂತೆಯೇ ಉತ್ತರ ಕರ್ನಾಟಕ ಭಾಗದಲ್ಲಿ ಮೈಕೊರೆಯುವ ಚಳಿಗೆ ಜನರು ತತ್ತರಿಸಲಿದ್ದಾರೆ ಎಂದು ತಜ್ಞರು ಮಾಹಿತಿ ನೀಡಿದ್ದಾರೆ.

ಧಾರವಾಡ ಕೃಷಿ ವಿಶ್ವವಿದ್ಯಾಲಯದ ಕೃಷಿ ಹವಾಮಾನ ಮುನ್ಸೂಚನಾ ಕೇಂದ್ರದ ಡಾ.ಆರ್.ಎಚ್.ಪಾಟೀಲ ಅವರು ಶೀತ ಗಾಳಿಯ ಬಗ್ಗೆ ಮುನ್ಸೂಚನೆ ನೀಡಿದ್ದು, ರಾಜ್ಯದಲ್ಲಿ ಚಳಿ ಡಿಸೆಂಬರ್ ಮೂರನೇ ವಾರದ ಬಳಿಕ ಹೆಚ್ಚಾಗಬೇಕಿತ್ತು. ಆದರೆ ಈ ಬಾರಿ ನವೆಂಬರ ಆರಂಭದಿಂದಲೇ ಶುರುವಾಗಿದೆ. ನವೆಂಬರ 24ರ ಬಳಿಕ ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಚಳಿ ಇನ್ನಷ್ಟು ಹೆಚ್ಚಾಗಲಿದ್ದು, ಜನರನ್ನು ನಡುಗಿಸಲಿದೆ ಎಂದು ತಿಳಿಸಿದ್ದಾರೆ.

ಈಗಾಗಲೇ ಹುಬ್ಬಳ್ಳಿ-ಧಾರವಾಡ, ಗದಗ, ರಾಯಚೂರು, ಕೊಪ್ಪಳ, ಬೆಳಗಾವಿ ಸೇರಿದಂತೆ ಹಲವೆಡೆಗಳಲ್ಲಿ ಮೈ ಕೊರೆಯುವ ಚಳಿಗೆ ಜನರು ಬೆಳಿಗ್ಗೆ 10 ಗಂಟೆಯಾದರೂ ಮನೆಯಿಂದ ಹೊರಬರಲಾಗದ ಸ್ಥಿತಿ ನಿರ್ಮಾಣವಾಗಿದೆ. ಇನ್ನು ನವೆಂಬರ 24ರ ಬಳಿಕ ಆರಂಭವಾಗಲಿರುವ ಚಳಿ ಜನರನ್ನು ಇನ್ನಷ್ಟು ಕಾಡಲಿದೆ ಎಂದು ಹೇಳಲಾಗುತ್ತಿದೆ.

Share This Article