ಟಿಪ್ಪು ಜಯಂತಿ ಆಚರಿಸಿದ್ದಕ್ಕೆ ನೋಟೀಸ

khushihost
ಟಿಪ್ಪು ಜಯಂತಿ ಆಚರಿಸಿದ್ದಕ್ಕೆ ನೋಟೀಸ

ಹುಬ್ಬಳ್ಳಿ :  ಈದ್ಗಾ ಮೈದಾನದಲ್ಲಿ ಬೆಳಿಗ್ಗೆ ಟಿಪ್ಪು ಜಯಂತಿ ಆಚರಿಸಿದ ಬೆನ್ನಲ್ಲೇ ಪಾಲಿಕೆಯ ವಿರೋಧ ಪಕ್ಷದ ನಾಯಕ ದೊರೈರಾಜ ಮಣಿಕುಂಟ್ಲ ಅವರು ತಮ್ಮ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷದ ಸದಸ್ಯರು ಹಾಗೂ ಪಕ್ಷದ ಮುಖಂಡರೊಂದಿಗೆ ಟಿಪ್ಪು ಜಯಂತಿ ಆಚರಿಸಿದ್ದಾರೆ. ಈ ಕಾರಣ ಪಾಲಿಕೆ ಮೇಯರ್ ಅವರು ದೊರೈರಾಜ ಮಣಿಕುಂಟ್ಲರಿಗೆ ಕಾರಣ ಕೇಳಿ ನೋಟಿಸ್ ಜಾರಿಗೊಳಿಸಿದ್ದಾರೆ.

ಟಿಪ್ಪು ಜಯಂತಿ ಆಚರಿಸಬಾರದೆಂದು ಸರ್ಕಾರದ ಆದೇಶವಿದ್ದರೂ ಟಿಪ್ಪು ಜಯಂತಿ ಆಚರಿಸಿದ್ದು ಯಾಕೆ… ಇದಕ್ಕೆ ಕಾರಣ ನೀಡುವಂತೆ ನೋಟಿಸ್ ನೀಡಿದ್ದಾರೆ.

ಟಿಪ್ಪು ಚಿತ್ರಕ್ಕೆ ಪೂಜೆ ಸಲ್ಲಿಸಿದ ಮುಖಂಡರು, ಟಿಪ್ಪು ಪರ ಘೋಷಣೆಗಳನ್ನು ಕೂಗಿ, ಸಿಹಿ ಹಂಚಿ ಸಂಭ್ರಮಿಸಿದರು.

Share This Article