ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿದ್ದಕ್ಕೆ ನರ್ಸಿಂಗ್ ವಿದ್ಯಾರ್ಥಿನಿಯ ಆತ್ಮಹತ್ಯೆ

khushihost
ಪರೀಕ್ಷೆಯಲ್ಲಿ ಕಡಿಮೆ ಅಂಕ  ಬಂದಿದ್ದಕ್ಕೆ ನರ್ಸಿಂಗ್ ವಿದ್ಯಾರ್ಥಿನಿಯ ಆತ್ಮಹತ್ಯೆ

ವಿಜಯಪುರ: ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿದೆ ಎಂದು ಮನನೊಂದು ನರ್ಸಿಂಗ ವಿದ್ಯಾರ್ಥಿನಿ ನೇಣಿಗೆ ಶರಣಾದ ಘಟನೆ ಜಿಲ್ಲೆಯ ಚಡಚಣ ಪಟ್ಟಣದಲ್ಲಿ ನಡೆದಿದೆ.

ಕೀರ್ತನಾ ಮಧುಕರ (21) ಆತ್ಮಹತ್ಯೆ ಮಾಡಿಕೊಂಡ ಯುವತಿ. ವಿಜಯಪುರದ ಬಿಎಲ್​ಡಿಇ ನರ್ಸಿಂಗ್ ಕಾಲೇಜ​ನಲ್ಲಿ ಎರಡನೇ ವರ್ಷದ ನರ್ಸಿಂಗ​ ಕೋರ್ಸ​ ಓದುತ್ತಿದ್ದಳು. ಮೊದಲನೇ ವರ್ಷದ ಅಂತಿಮ ಪರೀಕ್ಷೆ ಬರೆದು ಎರಡನೇ ವರ್ಷಕ್ಕೆ ದಾಖಲಾತಿ ಪಡೆದಿದ್ದಳು ಎನ್ನಲಾಗಿದೆ.

ಮೊದಲು ವರ್ಷದ ಅಂತಿಮ ಪರೀಕ್ಷೆಯ ಫಲಿತಾಂಶ ಬಂದಾಗ ನಿರೀಕ್ಷಿಸಿದಷ್ಟು ಅಂಕಗಳು ಬಂದಿರಲಿಲ್ಲ. ಇದರಿಂದ ಮನನೊಂದಿದ್ದ ಕೀರ್ತನಾ, ಮನೆಯಲ್ಲಿ ಫ್ಯಾನ್​ಗೆ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾಳೆ. ಈ ಕುರಿತು ಚಡಚಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article