ಹೈಕೋರ್ಟ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ. ವರಾಳೆ ನೇಮಕ 

khushihost
ಹೈಕೋರ್ಟ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ. ವರಾಳೆ ನೇಮಕ 

ಬೆಂಗಳೂರು : ಬಾಂಬೆ ಹೈಕೋರ್ಟ ನ್ಯಾಯಮೂರ್ತಿ ನ್ಯಾಯಮೂರ್ತಿ ಪ್ರಸನ್ನ ಬಿ.ವರಾಳೆ ಅವರನ್ನು ಕರ್ನಾಟಕದ ಹೈಕೋರ್ಟಿನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಿ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದೆ.

ಕೊಲಿಜಿಯಂ ಸೆಪ್ಟೆಂಬರ್ 28 ರಂದು ನ್ಯಾಯಮೂರ್ತಿ ವರಾಳೆ ಅವರ ಉನ್ನತಿಗೆ ಶಿಫಾರಸು ಮಾಡಿತ್ತು. ನ್ಯಾ. ವರಾಳೆ ಅವರು 1962 ಜೂನ್ 23ರಂದು ಜನಿಸಿದ್ದು, 1985ರ ಆಗಸ್ಟ್ 12 ರಂದು ವಕೀಲರಾಗಿ ಸೇವೆ ಆರಂಭಿಸಿದರು..

ಬಳಿಕ 1990ರಿಂದ 1992ರವರೆಗೆ ಔರಂಗಾಬಾದ​ನ ಅಂಬೇಡ್ಕರ್ ಕಾನೂನು ಕಾಲೇಜಿನಲ್ಲಿ ಕಾನೂನು ಉಪನ್ಯಾಸಕರಾಗಿ ಮತ್ತು ಸಹಾಯ ಸರ್ಕಾರಿ ಮತ್ತು ಹೆಚ್ಚುವರಿ ಸರ್ಕಾರಿ ಅಭಿಯೋಜಕರಾಗಿ, ಹೈಕೋರ್ಟ ಪೀಠದಲ್ಲಿ ಸೇವೆ ಸಲ್ಲಿಸಿದ್ದಾರೆ.

Share This Article