ಪದಗ್ರಹಣ ಸಮಾರಂಭಕ್ಕೆ ಭರದ ಸಿದ್ಧತೆ; ಎರಡನೇ ಬಾರಿ ಮುಖ್ಯಮಂತ್ರಿಯಾಗಿ ಶನಿವಾರ ಸಿದ್ದರಾಮಯ್ಯ ಪ್ರಮಾಣವಚನ

khushihost
ಪದಗ್ರಹಣ ಸಮಾರಂಭಕ್ಕೆ ಭರದ ಸಿದ್ಧತೆ; ಎರಡನೇ ಬಾರಿ ಮುಖ್ಯಮಂತ್ರಿಯಾಗಿ ಶನಿವಾರ ಸಿದ್ದರಾಮಯ್ಯ ಪ್ರಮಾಣವಚನ

ಹೊಸದಿಲ್ಲಿ, ೧೮- ಹಿರಿಯ ರಾಜಕೀಯ ಮುತ್ಸದ್ಧಿ ಸಿದ್ದರಾಮಯ್ಯ ಅವರು ಎರಡನೇ ಬಾರಿ ಮುಖ್ಯಮಂತ್ರಿ ಹುದ್ದೆಗೇರಲಿದ್ದಾರೆ.

ನಿನ್ನೆ ರಾತ್ರಿ ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಮ್ಮುಖದಲ್ಲಿ ಕಾಂಗ್ರೆಸ್ ನಾಯಕರ ಜೊತೆ ನಡೆದ ಸಭೆಯಲ್ಲಿ ಒಮ್ಮತಕ್ಕೆ ಬಂದು ಸಿದ್ದರಾಮಯ್ಯ ಅವರು ಮುಂದಿನ ಮುಖ್ಯಮಂತ್ರಿ ಎಂದು ಮಲ್ಲಿಕಾರ್ಜುನ ಖರ್ಗೆ ತೀರ್ಮಾನಿಸಿದರು.

ಹಠ ಹಿಡಿಡಿದ್ದ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ ಸಹ ಹೈಕಮಾಂಡ್ ತೀರ್ಮಾನಕ್ಕೆ ಒಪ್ಪಿಕೊಂಡಿದ್ದಾರೆ.

ಆರಂಭದ ಎರಡೂವರೆ ವರ್ಷ ಸಿದ್ದರಾಮಯ್ಯ ಮತ್ತು ಉಳಿದ ಎರಡೂವರೆ ವರ್ಷ ಡಿ ಕೆ ಶಿವಕುಮಾರ ಮುಖ್ಯಮಂತ್ರಿ ಪಟ್ಟ ಅಲಂಕರಿಸಿ ಎಂದು ಮಲ್ಲಿಕಾರ್ಜುನ ಖರ್ಗೆ ಸೂಚಿಸಿದ್ದಾರೆ ಎನ್ನಲಾಗುತ್ತಿದೆ.

ಡಿ ಕೆ ಶಿವಕುಮಾರ ಹೈಕಮಾಂಡ್ ನಿರ್ಧಾರಕ್ಕೆ ಒಪ್ಪಿ ಉಪ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.

ಕರ್ನಾಟಕದ ಮುಖ್ಯಮಂತ್ರಿಯಾಗಿ ಎರಡನೇ ಬಾರಿಗೆ ಸಿದ್ದರಾಮಯ್ಯ ಇದೇ ಶನಿವಾರ ಮೇ 20ರಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಮೇ 20 ಶನಿವಾರ ಮಧ್ಯಾಹ್ನ 12.30ಕ್ಕೆ ಪದಗ್ರಹಣ ನಡೆಯಲಿದ್ದು ಅದಕ್ಕೆ ಭರದ ಸಿದ್ಧತೆ ಆರಂಭವಾಗಿದೆ.

ಸಿದ್ದರಾಮಯ್ಯ ಮುಂದಿನ ಮುಖ್ಯಮಂತ್ರಿ ಎಂದು ವರದಿ ಬರುತ್ತಿದ್ದಂತೆ ಅವರ ಹುಟ್ಟೂರು ಮೈಸೂರಿನ ಸಿದ್ದರಾಮನ ಹುಂಡಿಯಲ್ಲಿ ಜನರ ಹರ್ಷೋದ್ಘಾರ ಮುಗಿಲುಮುಟ್ಟಿದೆ. ಬೆಂಗಳೂರಿನಲ್ಲಿರುವ ಅವರ ನಿವಾಸಕ್ಕೆ ಬಿಗಿ ಭದ್ರತೆ ಒದಗಿಸಲಾಗಿದ್ದು ಅವರ ನಿವಾಸದ ಸುತ್ತಮುತ್ತ ಬ್ಯಾನರ್, ಕಟೌಟ್ ಗಳು ರಾರಾಜಿಸುತ್ತಿವೆ.

Share This Article