ಶೀಘ್ರ 3228 ಶಿಕ್ಷಕರ ನೇಮಕಕ್ಕೆ ತಯಾರಿ

khushihost
ಶೀಘ್ರ 3228 ಶಿಕ್ಷಕರ ನೇಮಕಕ್ಕೆ ತಯಾರಿ

ಬೆಂಗಳೂರು : ಶೀಘ್ರದಲ್ಲೇ ಶಿಕ್ಷಣ ಇಲಾಖೆಯು 2,500 ಪ್ರೌಢಶಾಲೆ ಶಿಕ್ಷಕರು ಹಾಗೂ 778 ಪಿಯು ಕಾಲೇಜು ಉಪನ್ಯಾಸಕರ ನೇಮಕಾತಿ ನಡೆಯಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿಕ್ಷಣ ಇಲಾಖೆಯು ಶೀಘ್ರವೇ 2,500 ಪ್ರೌಢಶಾಲೆ ಶಿಕ್ಷಕರು ಹಾಗೂ 778 ಪಿಯು ಕಾಲೇಜು ಉಪನ್ಯಾಸಕರ ನೇಮಕಾತಿ ಮಾಡಿಕೊಳ್ಳಲು ಮುಂದಾಗಿದ್ದು, ಶೀಘ್ರವೇ ಅಧಿಸೂಚನೆ ಪ್ರಕಟಗೊಳ್ಳಲಿದೆ ಎಂದು ಹೇಳಿದ್ದಾರೆ.

15 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಅಂತಿಮ ಹಂತದಲ್ಲಿದ್ದು, ಡಿಸೆಂಬರ್ ಅಂತ್ಯಕ್ಕೆ ಪೂರ್ಣಗೊಳ್ಳಲಿದೆ. ಬಳಿಕ 2,500 ಪ್ರೌಢಶಾಲೆ ಶಿಕ್ಷಕರು ಹಾಗೂ 778 ಪಿಯು ಕಾಲೇಜು ಉಪನ್ಯಾಸಕರ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಹೇಳಿದರು.

Share This Article