ಸತೀಶ ಜಾರಕಿಹೊಳಿ ಬೆಂಬಲಿಸಿ ಇಂದು ವಿವಿಧ ದಲಿತ, ಪ್ರಗತಿಪರ ಸಂಘಟನೆಗಳ ಪ್ರತಿಭಟನೆ

khushihost
ಸತೀಶ ಜಾರಕಿಹೊಳಿ ಬೆಂಬಲಿಸಿ ಇಂದು ವಿವಿಧ ದಲಿತ, ಪ್ರಗತಿಪರ ಸಂಘಟನೆಗಳ ಪ್ರತಿಭಟನೆ

ಬೆಳಗಾವಿ: ಹಿಂದೂ ಪದದ ಬಗ್ಗೆ  ಶಾಸಕ ಸತೀಶ​ ಜಾರಕಿಹೊಳಿ ಹೇಳಿಕೆ ನಂತರ ಸತೀಶ ಜಾರಕಿಹೊಳಿ ವಿಷಾದ ವ್ಯಕ್ತಪಡಿಸಿದ್ದರು. ಇದನ್ನೇ ನೆಪವಾಗಿರಿಸಿ ಸತೀಶ ಜಾರಕಿಹೊಳಿ ಅವರ ತೇಜೋವಧೆ ಮಾಡಲಾಗುತ್ತಿದೆ ಎಂದು ಆರೋಪಿಸಿ ವಿವಿಧ ಸಂಘಟನೆಗಳು ಇಂದು ಬೃಹತ್​ ಪ್ರತಿಭಟನೆ ಮಾಡಲು ಮುಂದಾಗಿವೆ.

ಮಾನವ ಬಂಧುತ್ವ ವೇದಿಕೆ ಮತ್ತು ದಲಿತ, ಪ್ರಗತಿಪರ ಸಂಘಟನೆಗಳ ಒಕ್ಕೂಟ, ಪ್ರಗತಿಪರ ಸ್ವಾಮೀಜಿಗಳು ಪ್ರತಿಭಟನೆ ಮಾಡಲು ಮುಂದಾಗಿದ್ದಾರೆ.

ಸತೀಶ​ ಜಾರಕಿಹೊಳಿ ಅವರು ನ. 6ರಂದು ನಿಪ್ಪಾಣಿಯಲ್ಲಿ ಹಿಂದೂ ಶಬ್ದದ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಸಂಬಂಧ ಇಂದು ಸತೀಶ ಜಾರಕಿಹೊಳಿ ಅವರನ್ನು ಬೆಂಬಲಿಸಿ ನಿಪ್ಪಾಣಿಯಲ್ಲಿ ಪ್ರತಿಭಟನೆ ಮಾಡಲು ವಿವಿಧ ಸಂಘಟನೆಗಳು ಮುಂದಾಗಿವೆ.

Share This Article