ಕಾಂಗ್ರೆಸ್ ನಲ್ಲಿ ಮಹಿಳಾ ಮುಖ್ಯಮಂತ್ರಿ ಬೇಡಿಕೆ ಇಟ್ಟ ಪುಷ್ಪಾ ಅಮರನಾಥ

khushihost
ಕಾಂಗ್ರೆಸ್ ನಲ್ಲಿ ಮಹಿಳಾ ಮುಖ್ಯಮಂತ್ರಿ ಬೇಡಿಕೆ ಇಟ್ಟ ಪುಷ್ಪಾ ಅಮರನಾಥ

ಹುಬ್ಬಳ್ಳಿ: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿ ಸ್ಥಾನಕ್ಕಾಗಿ ಪೈಪೋಟಿ ಆರಂಭವಾಗಿದ್ದು ಇದೀಗ ಮಹಿಳಾ ಮುಖ್ಯಮಂತ್ರಿ ಕೂಗು ಆರಂಭವಾಗಿದೆ.

ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ ಅವರು ಕಾಂಗ್ರೆಸ್ ನಲ್ಲಿ ಮಹಿಳಾ ಮುಖ್ಯಮಂತ್ರಿ ಬೇಡಿಕೆ ಇಟ್ಟಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಪುಷ್ಪಾ ಅಮರನಾಥ, ಮಹಿಳೆಯರು ಅರ್ಧದಷ್ಟು ಜನಸಂಖ್ಯೆ ಇದ್ದೇವೆ. ಕಾಂಗ್ರೆಸ್ ನಲ್ಲಿ ಯಾಕೆ ಮಹಿಳೆಗೆ ಮುಖ್ಯಮಂತ್ರಿ ಸ್ಥಾನ ಕೊಡಬಾರದು? ಅದಕ್ಕೆ ತಕ್ಕ ವಾತಾವರಣ ನಿರ್ಮಾಣ ಸೃಷ್ಟಿಯಾಗಬೇಕಿದೆ ಎಂದು ಹೇಳಿದರು.

ಟಿಕೆಟ್ ಹಂಚಿಕೆ ವೇಳೆ ಮಹಿಳೆಯರಿಗೆ ಆದ್ಯತೆ ಕೊಡಬೇಕು. ಇದನ್ನು ಈಗಾಗಲೇ ನಮ್ಮ ನಾಯಕರ ಗಮನಕ್ಕೂ ತರಲಾಗಿದೆ. ಮಹಿಳೆಯರಿಗೆ ಟಿಕೆಟ್ ಕೊಡುವ ಬಗ್ಗೆ ಪಕ್ಷದಲ್ಲಿಯೂ ಚರ್ಚೆ ನಡೆದಿದೆ. ಕಾಂಗ್ರೆಸ್ ನಲ್ಲಿ ದಲಿತ ಮುಖ್ಯಮಂತ್ರಿಯ ಬಗ್ಗೆ ಚರ್ಚೆ ಕೂಡ ಇದೆ. ದಲಿತ ಮುಖ್ಯಮಂತ್ರಿ ಕಾಂಗ್ರೆಸ್ ನಲ್ಲಿ ಮಾತ್ರ ಸಾಧ್ಯ ಎಂದು ಹೇಳಿದ್ದಾರೆ.

Share This Article