ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ಗಾಂಧಿ ಮತದಾನ 

khushihost
ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ಗಾಂಧಿ ಮತದಾನ 

ಬಳ್ಳಾರಿ: ಇಂದು ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಿತು. ಹೀಗಾಗಿ ಭಾರತ್​ ಜೋಡೋ ಯಾತ್ರೆಗೆ ತಾತ್ಕಾಲಿಕವಾಗಿ ವಿರಾಮ ನೀಡಲಾಗಿತ್ತು.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಬಳ್ಳಾರಿಯ ಸಂಗನಕಲ್ಲು ಗ್ರಾಮ ಬಳಿಯೇ ವಾಸ್ತವ್ಯ ಹೂಡಿದ್ದು, ಅಲ್ಲಿಂದಲೇ ಮತದಾನ ಮಾಡಿದ್ದಾರೆ. ಹೀಗಾಗಿ ಮತದಾನ ಬೇಕಾಗುವ ಎಲ್ಲ ವ್ಯವಸ್ಥೆ ಈಗಾಗಲೇ ಕಲ್ಪಿಸಲಾಗಿತ್ತು.

ಕಾಂಗ್ರೆಸ್‌ ಹಿರಿಯ ನಾಯಕ ಮಲ್ಲಿಕಾರ್ಜುನ್‌ ಖರ್ಗೆ ಮತ್ತು ಸಂಸದ ಶಶಿ ಥರೂರ‌ ಅವರ ನಡುವೆ ಸ್ಪರ್ಧೆ ಇದ್ದು, ಮಲ್ಲಿಕಾರ್ಜುನ ಖರ್ಗೆ ಅವರು ಗೆಲ್ಲುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ.

Share This Article