ರಾಜ್ಯದಲ್ಲಿ ಒಂದು ವಾರ ಮಳೆಯ ಮುನ್ಸೂಚನೆ

khushihost
ರಾಜ್ಯದಲ್ಲಿ ಒಂದು ವಾರ ಮಳೆಯ ಮುನ್ಸೂಚನೆ

ಬೆಂಗಳೂರು, 18- ರಾಜ್ಯದ ಹಲವು ಜಿಲ್ಲೆಗಳಲ್ಲಿ ಸೋಮವಾರದಿಂದ ಒಂದು ವಾರಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಸೆಪ್ಟೆಂಬರ್ 26 ರವರೆಗೆ ಮಳೆಯಾಗಲಿದೆ. ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದೆ. ದಕ್ಷಿಣ ಒಣನಾಡಿನಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. 5 ದಿನಗಳ ಕಾಲ ಗುಡುಗು ಸಹಿತ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಗಾಳಿಯ ವೇಗವೂ ಸಹ ಗಂಟೆಗೆ 45 ರಿಂದ 55 ಕಿ. ಮೀ. ವೇಗದಲ್ಲಿ ಇರದಲಿದೆ ಎಂದು ಅಂದಾಜಿಸಲಾಗಿದೆ.

ಮುಂದಿನ 24 ಗಂಟೆಗಳಲ್ಲಿ ಕರ್ನಾಟಕ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 40ರಿಂದ 55 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದೆ, ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೀದರ, ಯಾದಗಿರಿ ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ.

Share This Article