ಸಹಾಯಕ ಪ್ರಾಧ್ಯಾಪಕರ ನೇಮಕಾತಿ : 1:3 ಅನುಪಾತದ ಆಯ್ಕೆ ಪಟ್ಟಿ ಬಿಡುಗಡೆ

khushihost
ಸಹಾಯಕ ಪ್ರಾಧ್ಯಾಪಕರ ನೇಮಕಾತಿ : 1:3 ಅನುಪಾತದ ಆಯ್ಕೆ ಪಟ್ಟಿ ಬಿಡುಗಡೆ

ಬೆಂಗಳೂರು : 1,242 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ 1:3 ಅನುಪಾತದಲ್ಲಿ ಅಭ್ಯರ್ಥಿಗಳ ಆಯ್ಕೆ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಕಾಲೇಜು ಶಿಕ್ಷಣ ಇಲಾಖೆಯಿಂದ ಒದಗಿಸಲಾದ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ವರ್ಗೀಕರಣದಂತೆ ಹಾಗೂ ಅಭ್ಯರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಗಳಿಸಿರುವ ಅಂಕ ಮತ್ತು ಮೀಸಲಾತಿ ಆಧಾರದ ಮೇಲೆ ಮೂಲ ದಾಖಲೆಗಳ ಪರಿಶೀಲನೆಗೆ ಅರ್ಹರಾದ ವಿಷಯವಾರು ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಇಲಾಖೆಯ ವೆಬ್ ಸೈಟ್ http:/kea.kar.nic.in ಗೆ ಸಂಪರ್ಕಿಸುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.

 

 

Share This Article