ಟಿಪ್ಪು ಎಕ್ಸ್​ಪ್ರೆಸ್ ರೈಲಿನ ಹೆಸರು ಬದಲಾಯಿಸುವ ಅಗತ್ಯವಿರಲಿಲ್ಲ : ಸಿದ್ದರಾಮಯ್ಯ

khushihost
ಟಿಪ್ಪು ಎಕ್ಸ್​ಪ್ರೆಸ್ ರೈಲಿನ ಹೆಸರು ಬದಲಾಯಿಸುವ ಅಗತ್ಯವಿರಲಿಲ್ಲ : ಸಿದ್ದರಾಮಯ್ಯ

ಮಂಡ್ಯ : ಟಿಪ್ಪು ಎಕ್ಸ್​ಪ್ರೆಸ್ ರೈಲಿನ ಹೆಸರು ಬದಲಾಯಿಸುವ ಅಗತ್ಯವಿರಲಿಲ್ಲ. ಇದರ ಬದಲಾಗಿ ಹೊಸ ರೈಲಿಗೆ ಒಡೆಯರ್​ ಹೆಸರು ಇಟ್ಟಿದ್ದರೆ ಚೆನ್ನಾಗಿರುತ್ತಿತ್ತು ಎಂದು ಆದಿಚುಂಚನಗಿರಿ ಮಠದಲ್ಲಿ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಆದಿಚುಂಚನಗಿರಿ ಮಠಕ್ಕೆ ಭೇಟಿ ಬಳಿಕ ಮಾತನಾಡಿದ ಅವರು, ಬಿಜೆಪಿಯವರು ಬರಿ ಧರ್ಮ ರಾಜಕೀಯ ಮಾಡುತ್ತಾರೆ. ಒಡೆಯರ್ ಹೆಸರು ಇಡಲಿ ಪರ್ವಾಗಿಲ್ಲ ಆದರೆ ಬೇರೆ ರೈಲುಗಳು ಇರ್ಲೇ ಇಲ್ವಾ. ಯಾವಾಗ್ಲು ಜಾತಿ ಜಾತಿಗಳ ನಡುವೆ ಧರ್ಮಗಳ ನಡುವೆ ಬೆಂಕಿ ಹಚ್ಚುವ ಕೆಲಸ ಬಿಜೆಪಿ ಮಾಡುತ್ತದೆ. ಬಿಜೆಪಿ ಬರಿ ದ್ವೇಷ ಹುಟ್ಟಾಕುವ ಕೆಲಸ ಮಾಡುತ್ತಾರೆ ಎಂದು ಕಿಡಿಕಾರಿದರು.

 

Share This Article