ಪರೀಕ್ಷೆ ದಿನವೇ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಯ ಆತ್ಮಹತ್ಯೆ

khushihost
ಪರೀಕ್ಷೆ ದಿನವೇ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಯ ಆತ್ಮಹತ್ಯೆ

ಶಿವಮೊಗ್ಗ, 25 : ಪರೀಕ್ಷಾ ದಿನವೇ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಯಡೇಹಳ್ಳಿ ಗ್ರಾಮದಲ್ಲಿ ನಡೆದಿದೆ.

ಪರಶುರಾಮ ಬಾಬು (16) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಆನಂದಪುರದ ಕೆಪಿಎಸ್‌ ಸಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಯು ಚೆನ್ನಾಗಿಯೇ ಓದುತ್ತಿದ್ದ. ಪರೀಕ್ಷೆಗೆ ಎಲ್ಲಾ ಸಿದ್ಧತೆಯನ್ನೂ ಸಹ ಮಾಡಿಕೊಂಡಿದ್ದ. ಆದರೆ ಕೊನೆ ಕ್ಷಣದಲ್ಲಿ ಭಯದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪ್ರಾಥಮಿಕ ಮೂಲಗಳಿಂದ ತಿಳಿದು ಬಂದಿದೆ. ಈ ಸಂಬಂಧ ಆನಂದಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article