ಚಾಕೊಲೇಟ ಕದ್ದ ವಿಡಿಯೋ ವೈರಲ್ ಆಗುತ್ತಿದ್ದಂತೆ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ….!

khushihost
ಚಾಕೊಲೇಟ ಕದ್ದ ವಿಡಿಯೋ ವೈರಲ್ ಆಗುತ್ತಿದ್ದಂತೆ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ….!

ಕೋಲಕತ್ತಾ, ೧- ಸಹೋದರಿಯೊಂದಿಗೆ ಶಾಪಿಂಗ್ ಮಾಲ್ ಗೆ ತೆರಳಿದ್ದ ಪದವಿ ವಿದ್ಯಾರ್ಥಿನಿಯೊಬ್ಬಳು ಈ ವೇಳೆ ಚಾಕೊಲೇಟ್ ಕದ್ದಿದ್ದು, ಇದರ ವಿಡಿಯೋ ಸಿಸಿ ಟಿವಿಯಲ್ಲಿ ಸೆರೆಯಾಗಿತ್ತು.

ಈ ದೃಶ್ಯಾವಳಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆಯೇ ಅವಮಾನ ತಾಳಲಾರದೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ.

ಆಲಿಪುರ್ ದೌರ್ ಜಿಲ್ಲೆಯ ಈ ವಿದ್ಯಾರ್ಥಿನಿ ಸೆಪ್ಟೆಂಬರ್ 29ರಂದು ಶಾಪಿಂಗ್ ಮಾಲ್ ಗೆ ತೆರಳಿದ್ದು, ಈ ವೇಳೆ ಚಾಕೊಲೇಟ ಕದ್ದಿದ್ದಳು. ಬಳಿಕ ಆಕೆಗೆ ತಪ್ಪಿನ ಅರಿವಾಗಿದ್ದು ಮಾಲ್ ಸಿಬ್ಬಂದಿಯ ಕ್ಷಮೆಯಾಚಿಸಿ ಹಣವನ್ನೂ ಪಾವತಿಸಿದ್ದಳು.

ಇಷ್ಟಾದರೂ ಸಹ ಮಾಲ್ ಸಿಬ್ಬಂದಿ ಚಾಕೊಲೇಟ ಕದ್ದ ದೃಶ್ಯಾವಳಿಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಇದು ವೈರಲ್ ಆಗುತ್ತಿದ್ದಂತೆಯೇ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾಳೆ.

Share This Article