ಚಾಮರಾಜಪೇಟೆ ಈದ್ಗಾ ಮೈದಾನ ವಿವಾದ : ಮಧ್ಯಂತರ ಆದೇಶ ನೀಡಲು ಸುಪ್ರೀಮ ಕೋರ್ಟ ನಕಾರ 

khushihost
ಚಾಮರಾಜಪೇಟೆ ಈದ್ಗಾ ಮೈದಾನ ವಿವಾದ : ಮಧ್ಯಂತರ ಆದೇಶ ನೀಡಲು ಸುಪ್ರೀಮ ಕೋರ್ಟ ನಕಾರ 

ನವದೆಹಲಿ : ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವ ಆಚರಣೆ ವಿಚಾರಕ್ಕೆ ಸಂಬಂಧಿಸಿದಂತೆ ಮಧ್ಯಂತರ ಆದೇಶ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.

ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಅವಕಾಶ ನೀಡಿ ಹೈಕೋರ್ಟ್ ಆದೇಶ ಹೊರಡಿಸಿತು. ಆದರೆ ವಕ್ಫ್ ಮಂಡಳಿ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಮ ಕೋರ್ಟಿನ ದ್ವಿಸದಸ್ಯ ಪೀಠವು ಮಧ್ಯಂತರ ಆದೇಶ ನೀಡಲು ನಿರಾಕರಿಸಿದೆ.

ಅಲ್ಲದೇ ವಾದ ಪ್ರತಿವಾದಗಳ ವೇಳೆ ವಕೀಲರ ಅಭಿಪ್ರಾಯ ಬೇರೆ ಬೇರೆ ರೀತಿ ಬಂದಿರುವ ಕಾರಣಕ್ಕೆ ಚಾಮರಾಜಪೇಟೆ ಮೈದಾನ ಅರ್ಜಿ ವಿಚಾರಣೆಯನ್ನು ಸುಪ್ರೀಮ ಕೋರ್ಟಿನ ತ್ರಿಸದಸ್ಯ ಪೀಠಕ್ಕೆ ವರ್ಗಾವಣೆ ಮಾಡಿದೆ.

ಇಂದು ತ್ರಿಸದಸ್ಯ ಪೀಠ ಅರ್ಜಿ ವಿಚಾರಣೆಗೆ ಒಪ್ಪದಿದ್ದರೆ ನಾಳೆ ಹೈಕೋರ್ಟ ಆದೇಶದಂತೆ ಸರ್ಕಾರವೇ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆ ಮಾಡುವ ಸಾಧ್ಯತೆ ದಟ್ಟವಾಗಿದೆ.

Share This Article