ಬೆಳಗಾವಿ ಅಧಿವೇಶನದಲ್ಲಿ ನಿರ್ಣಯ ಕೈಗೊಂಡು ಸುವರ್ಣ ಸೌಧಕ್ಕೆ ಉನ್ನತ ಇಲಾಖೆಗಳನ್ನು ವರ್ಗಾಯಿಸಿ

khushihost
ಬೆಳಗಾವಿ ಅಧಿವೇಶನದಲ್ಲಿ ನಿರ್ಣಯ ಕೈಗೊಂಡು ಸುವರ್ಣ ಸೌಧಕ್ಕೆ ಉನ್ನತ ಇಲಾಖೆಗಳನ್ನು ವರ್ಗಾಯಿಸಿ

ಗೋಕಾಕ, ೧೮- ಬೆಳಗಾವಿಯ ಸುವರ್ಣ ವಿಧಾನಸೌಧಕ್ಕೆ ಸೆಕ್ರೆಟರಿಯೆಟ್ ಸಹಿತ ರಾಜ್ಯ ಸರ್ಕಾರದ ಉನ್ನತ ಇಲಾಖೆಗಳನ್ನು ಬೆಳಗಾವಿಯ ಸುವರ್ಣ ವಿಧಾನಸೌಧಕ್ಕೆ ವರ್ಗಾಯಿಸಬೇಕೆಂದು ಉತ್ತರ ಕರ್ನಾಟಕ ವಿಕಾಸ ವೇದಿಕೆ ಅಧ್ಯಕ್ಷ ಮತ್ತು ಹಿರಿಯ ಕಾಂಗ್ರೆಸ್ ಮುಖಂಡ ಅಶೋಕ ನಿಂಗಯ್ಯಾಸ್ವಾಮಿ ಪೂಜಾರಿ ಆಗ್ರಹಿಸಿದ್ದಾರೆ.

ಈ ಮೂಲಕ ಬೆಳಗಾವಿಯ ಸುವರ್ಣ ವಿಧಾನಸೌಧವನ್ನು ಆಡಳಿತಾತ್ಮಕ ಶಕ್ತಿ ಕೇಂದ್ರವನ್ನಾಗಿಸಬೇಕು. ಪ್ರಸಕ್ತ ವಿಧಾನಸಭೆ ಅಧಿವೇಶನದಲ್ಲಿಯೇ ಈ ಕುರಿತು ನಿರ್ಣಯ ತೆಗೆದುಕೊಳ್ಳಬೇಕೆಂದು ಅವರು ಸರಕಾರವನ್ನು ಒತ್ತಾಯಿಸಿದ್ದಾರೆ.

Share This Article