ತಾಯತ ಕಟ್ಟುವ ನೆಪದಲ್ಲಿ ಅತ್ಯಾಚಾರಕ್ಕೆ ಯತ್ನಿಸಿದ ಪೂಜಾರಿಯ ಬಂಧನ

khushihost
ತಾಯತ ಕಟ್ಟುವ ನೆಪದಲ್ಲಿ ಅತ್ಯಾಚಾರಕ್ಕೆ ಯತ್ನಿಸಿದ ಪೂಜಾರಿಯ ಬಂಧನ

ರಾಯಚೂರು: ದೇವಸ್ಥಾನದ ಪೂಜಾರಿ ವಿರುದ್ಧ ಅತ್ಯಾಚಾರ ಯತ್ನ ಆರೋಪ ಕೇಳಿ ಬಂದಿದೆ. ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಜಾಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

8 ವರ್ಷದ ಬಾಲಕಿ ಮೇಲೆ ಪೂಜಾರಿ ಅತ್ಯಾಚಾರಕ್ಕೆ ಯತ್ನಿಸಿರುವುದಾಗಿ ಆರೋಪ ಕೇಳಿ ಬಂದಿದೆ. ಎರಡು ಮೂರು ದಿನಗಳ ಹಿಂದೆ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಬಸವೇಶ್ವರ ದೇವಸ್ಥಾನದ ಪೂಜಾರಿಯನ್ನು ಬಂಧಿಸಲಾಗಿದೆ.

ಅನಾರೋಗ್ಯ ಹಿನ್ನೆಲೆಯಲ್ಲಿ ಬಾಲಕಿ ತಾಯಿಯೊಂದಿಗೆ ದೇವಸ್ಥಾನಕ್ಕೆ ಬಂದಿದ್ದಳು.  ತಾಯತ ಕಟ್ಟುವ ನೆಪದಲ್ಲಿ ಪೂಜಾರಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎನ್ನಲಾಗಿದೆ. ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article