ಐದೂವರೆ ಗಂಟೆ ತರಗತಿ ಕಡ್ಡಾಯವಾಗಿ ನಡೆಸುವಂತೆ ಶಿಕ್ಷಣ ಇಲಾಖೆ ಆದೇಶ

khushihost
ಐದೂವರೆ ಗಂಟೆ ತರಗತಿ ಕಡ್ಡಾಯವಾಗಿ ನಡೆಸುವಂತೆ ಶಿಕ್ಷಣ ಇಲಾಖೆ ಆದೇಶ

ಬೆಂಗಳೂರು : ಪೂರ್ವ ಪ್ರಾಥಮಿಕ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 5.30 ಗಂಟೆ ತರಗತಿ ಕಡ್ಡಾಯವಾಗಿ ನಡೆಸಬೇಕು ಎಂದು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ಶಿಕ್ಷಣ ಇಲಾಖೆಯ ನಿಯಮದಂತೆ ಶಾಲೆಗಳನ್ನು ಪ್ರತಿದಿನ 5.30 ಗಂಟೆ ನಡೆಸುವುದು ಕಡ್ಡಾಯವಾಗಿರುತ್ತದೆ. ಶನಿವಾರವೂ ಅರ್ಧ ದಿನ ಶಾಲೆಯನ್ನು ನಡೆಸಬೇಕಾಗಿರುತ್ತದೆ.

ಈ ನಿಯಮ ಪಾಲಿಸದ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳುವಲ್ಲಿ ನಿರ್ಲಕ್ಷ್ಯ ತೋರಿದವರ ವಿರುದ್ಧ ಕ್ರಮ ನಿಯಮಾನುಸಾರ ಕ್ರಮ ಕೈಗೊಳ್ಳಲು ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.

ಪ್ರತಿದಿನ ಕಡ್ಡಾಯವಾಗಿ 5.30 ತಾಸು ತರಗತಿಗಳನ್ನು ನಡೆಸಬೇಕು ಎಂಬ ನಿಯಮ ಪಾಲಿಸದ ಖಾಸಗಿ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಲಾಗಿದೆ.

Share This Article