ಹುಬ್ಬಳ್ಳಿಯ ಈದಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ತಡರಾತ್ರಿ ಅನುಮತಿ ನೀಡಿದ ಹೈಕೋರ್ಟ

khushihost
ಹುಬ್ಬಳ್ಳಿಯ ಈದಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ತಡರಾತ್ರಿ ಅನುಮತಿ ನೀಡಿದ ಹೈಕೋರ್ಟ

ಹುಬ್ಬಳ್ಳಿ, 31- ಹುಬ್ಬಳ್ಳಿಯ ದಶಕಗಳ ವಿವಾದಿತ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅನುಮತಿ ನೀಡಿ ಹೈಕೋರ್ಟ ವಿಭಾಗೀಯ ಪೀಠ ತಡರಾತ್ರಿ ಆದೇಶ ಹೊರಡಿಸಿದೆ.

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತರ ಆದೇಶವನ್ನು ಹೈಕೋರ್ಟ‌ ಎತ್ತಿಹಿಡಿದಿದೆ.

ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ವಿಚಾರಕ್ಕೆ ಸಂಬಂಧಿಸಿ ಚಾಮರಾಜಪೇಟೆ ಈದ್ಗಾ ಮೈದಾನದ ಸುಪ್ರೀಮ ಕೋರ್ಟ ಆದೇಶ ವಿಚಾರಣೆಗೆ ಅರ್ಜಿದಾರರು ಸಲ್ಲಿಸಿದ ಮನವಿ ಮೇರೆಗೆ ತಡರಾತ್ರಿ 10 ಗಂಟೆಗೆ ಅರ್ಜಿ ವಿಚಾರಣೆ ನಡೆಸಿತು. ನ್ಯಾಯಮೂರ್ತಿ ಅಶೋಕ ಕಿಣಗಿಯವರ ಕಚೇರಿಯಲ್ಲಿ ಅರ್ಜಿ ವಿಚಾರಣೆ ನಡೆಯಿತು. ವಾದ ವಿವಾದ ಆಲಿಸಿ ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಸಮ್ಮತಿ ನೀಡಲಾಗಿದೆ.

Share This Article