ಪತ್ನಿಯನ್ನು ಕೊಂದು ಮಂಚದ ಕೆಳಗಿಟ್ಟು ನಾಪತ್ತೆಯಾದ ಪತಿ

khushihost
ಪತ್ನಿಯನ್ನು ಕೊಂದು ಮಂಚದ ಕೆಳಗಿಟ್ಟು ನಾಪತ್ತೆಯಾದ ಪತಿ

ಬೆಳಗಾವಿ: ತವರಿನಿಂದ ಕೇಳಿದಾಗಲೆಲ್ಲಾ ವರದಕ್ಷಿಣೆ ತಂದು ಕೊಡುವುದಕ್ಕೆ ವಿರೋಧಿಸಿದ ಪತ್ನಿಯನ್ನು ಕೊಂದು ಮಂಚದ ಕೆಳಗೆ ಮಲಗಿಸಿ ಪತಿ ನಾಪತ್ತೆಯಾದ ಘಟನೆ ನಡೆದಿದೆ.

ಕಳೆದ ಮೂರು ದಿನದ ಹಿಂದೆ ಈ ಘಟನೆ ನಡೆದಿದ್ದು, ಆರೋಪಿ ಆಕಾಶ ಕುಂಬಾರ ಮೊಬೈಲ್ ಸ್ವಿಚ್ ಆಫ್ ಮಾಡಿ ಪರಾರಿಯಾಗಿದ್ದಾನೆ.
ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಕಮಲದಿನ್ನಿಯಲ್ಲಿ ಈ ಘಟನೆ ನಡೆದಿದ್ದು,ತಡವಾಗಿ ಬೆಳಕಿಗೆ ಬಂದಿದೆ.
ಸಾಕ್ಷಿ ಆಕಾಶ ಕುಂಬಾರ (20) ಕೊಲೆಯಾದವರು ಎಂದು ಗುರುತಿಸಲಾಗಿದೆ. ಕಳೆದ ನಾಲ್ಕು ತಿಂಗಳ ಹಿಂದೆಯೇ ಆಕಾಶ ಜೊತೆಗೆ ಸಾಕ್ಷಿ ಮದುವೆಯಾಗಿತ್ತು.
ಮದುವೆಯ ನಂತರ ತವರಿನಿಂದ ಮತ್ತಷ್ಟು ವರದಕ್ಷಿಣೆ ತರುವಂತೆ ಆಕೆಯ ಗಂಡ ಆಕಾಶ ಕಾಡಿಸುತ್ತಿದ್ದ ಎನ್ನಲಾಗಿದೆ.
ಕಳೆದ ಮೂರು ದಿನಗಳ ಹಿಂದೆ ಕೊಲೆ ಮಾಡಿ ಪತಿ ಪರಾರಿಯಾಗಿದ್ದು, ಮುಂಬೈಊರಿಗೆ ಹೋಗಿದ್ದ ಅತ್ತೆ ಮರಳಿ ಮನೆಗೆ ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಮೂಡಲಗಿ ಪೊಲೀಸರ ಹಾಗೂ ಗೋಕಾಕ ಡಿವೈಎಸ್ಪಿ ಭೇಟಿ ಪರಿಶೀಲನೆ ನಡೆಸಿದ್ದಾರೆ. ಸ್ಥಳಕ್ಕೆ ಮೂಡಲಗಿ ತಹಶೀಲ್ದಾರ್ ಶ್ರೀಶೈಲ್ ಗುಡಮೆ ಭೇಟಿ ನೀಡಿದ್ದಾರೆ. ಮೂಡಲಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share This Article