ಮಂಗಳೂರು ಸ್ಫೋಟ ಪ್ರಕರಣ; ಮತ್ತೆ ಮೂವರು ಪೊಲೀಸ್ ವಶಕ್ಕೆ

khushihost
ಮಂಗಳೂರು ಸ್ಫೋಟ ಪ್ರಕರಣ; ಮತ್ತೆ ಮೂವರು ಪೊಲೀಸ್ ವಶಕ್ಕೆ

ಮಂಗಳೂರು: ಮಂಗಳೂರು ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತೆ ಮೂವರನ್ನು ವಶಕ್ಕೆ ಪಡೆದಿದ್ದಾರೆ.

ಮಂಗಳೂರಿನ ನಾಗುರಿ ಬಳಿ ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಶಾರೀಕನನ್ನು ವಶಕ್ಕೆ ಪಡೆಯಲಾಗಿದ್ದು, ಆತನನ್ನು ಕಂಕನವಾಡಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ನಡುವೆ ಶಾರೀಕ ಜೊತೆ ನಿರಂತರ ಸಂಪರ್ಕದಲ್ಲಿದ್ದ ಮೂವರನ್ನು ಮಂಗಳೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇನ್ನೊಂದೆಡೆ ಮಂಗಳೂರಿನ ನಾಗುರಿ ಬಳಿ ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ ಸಂಬಂಧ ಆಟೋ ಚಾಲಕ ಪುರುಷೋತ್ತಮ ನೀಡಿರುವ ದೂರಿನ ಹಿನ್ನಲೆಯಲ್ಲಿ ಎಫ್ ಐ ಆರ್ ದಾಖಲಿಸಲಾಗಿದೆ.

Share This Article