ಪಾಕ್ ಪರ ಘೋಷಣೆ : ಮೂವರು ವಿದ್ಯಾರ್ಥಿಗಳು ಪೊಲೀಸ ವಶಕ್ಕೆ 

khushihost
ಪಾಕ್ ಪರ ಘೋಷಣೆ : ಮೂವರು ವಿದ್ಯಾರ್ಥಿಗಳು ಪೊಲೀಸ ವಶಕ್ಕೆ 

ಬೆಂಗಳೂರು: ನಗರದ ನ್ಯೂ ಹೊರೈಜನ್ ಕಾಲೇಜಿನ ಮೂವರು ಇಂಜಿನಿಯರಿಂಗ್‌ ವಿದ್ಯಾರ್ಥಿಗಳು ಪಾಕ್‌ ಪರ ಘೋಷಣೆ ಕೂಗಿದ್ದಾರೆ.

ಇಂಜಿನೀಯರಿಂಗ‌ ಮೊದಲ ವರ್ಷದ ಆರ್ಯನ್, ದಿನಕರ‌ ಮತ್ತು ರಿಯಾ ಎಂಬ ಮೂವರು ವಿದ್ಯಾರ್ಥಿಗಳು ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾರೆ. ಈ ವೇಳೆ ಇತರೆ ವಿದ್ಯಾರ್ಥಿಗಳು ಮೂವರನ್ನು ಥಳಿಸಲು ಮುಂದಾದಾಗ ಕೂಡಲೇ ಆ ವಿದ್ಯಾರ್ಥಿಗಳು ಉಳಿದ ವಿದ್ಯಾರ್ಥಿಗಳ ಬಳಿ ಕ್ಷಮೆಯಾಚಿಸಿದ್ದಾರೆ.

ವಿದ್ಯಾರ್ಥಿಗಳ ವಿರುದ್ಧ ಮಾರತ‌ಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಮೂವರು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ತಮಾಷೆ ಮಾಡಲು ಹೀಗೆ ಮಾಡಿದ್ದೇವೆ ಎಂದಿದ್ದಾರೆ.

ಆದರೂ ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ತನಿಖೆ ನಡೆಸುತ್ತಿದ್ದಾರೆ. ಮೂವರ ವಿರುದ್ಧ ಸದ್ಯ ಘಟನೆ ಸಂಬಂಧ ಎರಡು ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇನ್ನು ಕಾಲೇಜು ಆಡಳಿತ ಮಂಡಳಿ ಮೂವರೂ ವಿದ್ಯಾರ್ಥಿಗಳನ್ನು ವಜಾ ಮಾಡಿ ಆದೇಶ ಹೊರಡಿಸಿದೆ.

Share This Article