ರಸ್ತೆಯಲ್ಲಿ ಹೊರಟವರ ಮೇಲೆ ಬಿದ್ದ ಕಬ್ಬಿನ ಟ್ರ್ಯಾಕ್ಟರ್; ಮೂವರು ಮಹಿಳೆಯರ ಸಾವು

khushihost
ರಸ್ತೆಯಲ್ಲಿ ಹೊರಟವರ ಮೇಲೆ ಬಿದ್ದ ಕಬ್ಬಿನ ಟ್ರ್ಯಾಕ್ಟರ್; ಮೂವರು ಮಹಿಳೆಯರ ಸಾವು

ಬೆಳಗಾವಿ, ೪: ಕಾಗವಾಡ ತಾಲೂಕಿನ ಶೇಡಬಾಳ ಗ್ರಾಮದ ಬಳಿ ಕಬ್ಬು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ನ ಟ್ರೈಲರ್ ಪಲ್ಟಿಯಾಗಿ ನಾಲ್ವರು ಮಹಿಳೆಯರು ಮೃತಪಟ್ಟ ಘಟನೆ ಭಾನುವಾರ ಮುಂಜಾನೆ ಸಂಭವಿಸಿದೆ.

ಕೃಷಿ ಕೆಲಸಕ್ಕೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಾಲಾಬಾಯಿ ರಾವಸಾಬ ಐನಾಪುರೆ (61), ಚಂಪಾ ಲಕ್ಕಪ್ಪ ತಳಕಟ್ಟಿ (50), ಭಾರತಿ ವಡ್ರಾಳೆ (40) ಎಂಬವರ ಮೇಲೆ ಟ್ರೋಲಿ ಮತ್ತು ಅದರ ಮೇಲೆ ಹೇರಿದ್ದ ಕಬ್ಬು ಬಿದ್ದು ಈ ದುರ್ಘಟನೆ ಸಂಭವಿಸಿದೆ.

ಕೃಷಿ ಕಾರ್ಮಿಕ ಮಹಿಳೆಯರು ಮುಂಜಾನೆ ಕೆಲಸಕ್ಕೆ ತೆರಳುತ್ತಿದ್ದಾಗ ಶೇಡಬಾಳ ಗ್ರಾಮದ ಸಮೀಪ ಜಮಖಂಡಿ-ಮೀರಜ್ ರಸ್ತೆಯಲ್ಲಿ ಟ್ರ್ಯಾಕ್ಟರ್ ಟೇಲರ್ ಚಕ್ರ ಕಟ್ಟಾಗಿ, ಇವರ ಮೇಲೆ ಬಿದ್ದಿದೆ. ಇದರ ಪರಿಣಾಮ ಗಂಭೀರ ಗಾಯಗೊಂಡು ಸ್ಥಳದಲ್ಲೇ ಎಲ್ಲರೂ ಮೃತಪಟ್ಟಿದ್ದಾರೆ.

ಕಾಗವಾಡ ಶಾಸಕ ರಾಜು ಕಾಗೆ ಭೇಟಿ ನೀಡಿ ಪರಿಶೀಲಿಸಿ ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ಟ್ರೋಲಿಯಲ್ಲಿ ನಿಗದಿ ಪಡಿಸಿದ ಭಾರರಕ್ಕಿಂತ ಹೆಚ್ಚು ಕಬ್ಬು ಹೇರಲಾಗಿತ್ತೆಂದು ತಿಳಿದುಬಂದಿದ್ದು ಈಚೆಗೆ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಕಬ್ಬು ವಾಹನಗಳ ಅಪಘಾತಗಳು ಹೆಚ್ಚೆಚ್ಚು ವರದಿಯಾಗುತ್ತಿವೆ

ಕಾಗವಾಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article